
ಬೆಂಗಳೂರು (ಮಾ.13): ನಗರಾಭಿವೃದ್ಧಿ ಹಾಗೂ ಹಜ್ ಸಚಿವ ರೋಶನ್ ಬೇಗ್ ಖಾಸಗಿ ಕಾರ್ಯಕ್ರಮಕ್ಕೆ ಸರ್ಕಾರಿ ಲೆಟರ್’ಹೆಡ್ ಬಳಸಿದ್ದಾರೆ.
ಮುಂಬರುವ ಶನಿವಾರ ನಡೆಯಲಿರುವ ಪುತ್ರನ ವಿವಾಹ ಸಮಾರಂಭಕ್ಕೆ ಗಣ್ಯ ಹಾಗೂ ಅತೀ ಗಣ್ಯ ವ್ಯಕ್ತಿಗಳಿಗೆ ಕಳುಹಿಸಿರುವ ಆಮಂತ್ರಣ ಪತ್ರದೊಂದಿಗೆ ಸರ್ಕಾರಿ ಲೆಟರ್’ಹೆಡ್ಡನ್ನು ಬಳಸಿರುವ ಬೇಗ್ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇಳಿಕೊಂಡಿದ್ದಾರೆ.
ಮಾರ್ಚ್ 18ರಂದು ಕಾನ್ಪುರದಲ್ಲಿ ವಿವಾಹ ನಡೆಯಲಿದ್ದು 26 ಮಾರ್ಚ್’ಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರಂಭ ನಡೆಯಲಿದೆ.
ಸರ್ಕಾರಿ ಲೆಟರ್’ಹೆಡ್ ಕಚೇರಿ ಉದ್ದೇಶಕ್ಕೆ ಬಳಕೆಯಾಗಬೇಕೇ ಹೊರತು ವೈಯುಕ್ತಿಕ ಉದ್ದೇಶಕ್ಕೆ ಬಳಕೆಯಾಗಬಾರದು. ಸಚಿವರ ಕ್ರಮ ಖಂಡನೀಯವೆಂದು ರಾಜಕೀಯ ಹೋರಾಟಗಾರ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.
ಆದರೆ ಸಚಿವ ಬೇಗ್ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲವೆಂದು ಹೇಳಿದ್ದಾರೆ. ತಾನು ಅಂತಹ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲವೆಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.