ನೆರೆ ಸಂತ್ರಸ್ತರಿಗೆ ಸಚಿವ ಜಮೀರ್‌ ಅಹಮ್ಮದ್ ರಿಂದ ಆಹಾರ ಕಿಟ್‌

By Web DeskFirst Published Aug 26, 2018, 11:11 AM IST
Highlights

ಕೊಡಗು ಸಂತ್ರಸ್ತರಿಗೆ ಸಚಿವ ಜಮೀರ್ ಅಹಮದ್ ಆಹಾರ ಕಿಟ್ ಗಳನ್ನು ವಿತರಿಸಿದರು.  ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮಂದಿನ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು. 50 ಸಾವಿರ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಶನಿವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಹಾರದ ಕಿಟ್‌ಗಳನ್ನು ವತರಿಸಿದ್ದಾರೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೋದಾಮಿನಲ್ಲಿ ಕೆಲವು ಸಂತ್ರಸ್ತರಿಗೆ ಸಾಂಕೇತಿಕವಾಗಿ ಕಿಟ್‌ ವಿತರಿಸಿ ಮಾತನಾಡಿದ ಅವರು, ನೆರೆಗೆ ಸಿಲುಕಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮಂದಿನ 15 ದಿನದಲ್ಲಿ ತಾತ್ಕಾಲಿಕ ಪಡಿತರ ಚೀಟಿ ವಿತರಿಸಲಾಗುವುದು. 50 ಸಾವಿರ ಕುಟುಂಬಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

10 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ, ಉಪ್ಪು, ಸಕ್ಕರೆ, 1 ಲೀ. ಅಡುಗೆ ಎಣ್ಣೆ, 5 ಲೀ. ಸೀಮೆಎಣ್ಣೆಯನ್ನು ಕಿಟ್‌ ಒಳಗೊಂಡಿದೆ. ಸಾಧ್ಯವಾದಲ್ಲಿ ಇದರ ಸಂಖ್ಯೆಯನ್ನು ಇನ್ನಷ್ಟುಹೆಚ್ಚಿಸಲಾಗುವುದು. ಜಿಲ್ಲೆಯಲ್ಲಿ ಸುಮಾರು 50ಕ್ಕಿಂತ ಹೆಚ್ಚಿನ ಪರಿಹಾರ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಅಕ್ಕಿ ಮತ್ತು ತೊಗರಿ ಬೇಳೆಯನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

click me!