
ಬೆಂಗಳೂರು(ಡಿ.7): ಹಿಂದಿನ ಬಿಜೆಪಿ ಸರ್ಕಾರದ ಅವಧಿಯಷ್ಟು ಭ್ರಷ್ಟಾಚಾರ ಆರೋಪಗಳು ಈ ಸರ್ಕಾರದಲ್ಲಿ ಕೇಳಿಬಂದಿಲ್ಲವಾದರೂ, ಸಿದ್ದರಾಮಯ್ಯ ಸಂಪುಟದಲ್ಲಿ ಭ್ರಷ್ಟಾಚಾರಿಗಳು ಹೆಚ್ಚಿದ್ದಾರೆ, ಅವರಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಬಹುಪಾಲು ಜನರು ಖಚಿತವಾಗಿ ನುಡಿದಿರುವುದು ಸರ್ಕಾರಕ್ಕೆ ಹಿನ್ನಡೆಯಲ್ಲದೆ ಮತ್ತೇನೂ ಅಲ್ಲ. ತಮ್ಮ ಸರ್ಕಾರ ಭ್ರಷ್ಟಾಚಾರರಹಿತ, ಪಾರದರ್ಶಕ ಆಡಳಿತ ನೀಡಿದೆ ಎಂದು ಹೇಳಿಕೊಳ್ಳುವ ಹಾಗೂ ಇದೇ ಕಾರಣಕ್ಕೆ ಬಿಜೆಪಿಯನ್ನು ಟೀಕಿಸುವ ಸಿದ್ದರಾಮಯ್ಯ ಅವರಿಗೆ ಇದು ಎಚ್ಚರಿಕೆಯ ಗಂಟೆ.
ಮಹಿಳೆಯರಿಗಿಂತ ಪುರುಷರಲ್ಲಿ ಈ ಭಾವನೆ ಹೆಚ್ಚಿದ್ದರೆ, ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶದಲ್ಲಿ ಸಚಿವರು ಭ್ರಷ್ಟರಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ. ವಿವಿಧ ಸಮುದಾಯಗಳ ಪೈಕಿ ಒಕ್ಕಲಿಗರಲ್ಲಿ ಶೇ.51 ಮಂದಿ ಭ್ರಷ್ಟ ಮಂತ್ರಿಗಳು ಇದ್ದಾರೆ ಎಂದು ಹೇಳಿರುವುದು ಗಮನಾರ್ಹ. ಆದರೆ ದಲಿತರಲ್ಲಿ ಶೇ.47 ಮಂದಿ ಅದಕ್ಕೆ ತದ್ವಿರುದ್ಧವಾದ ಭಾವನೆ ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.