
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯದವರಲ್ಲಿ ಅತೃಪ್ತಿ ಇರುವುದು ನಿಜ. ಎಲ್ಲಾ ಶಾಸಕರಿಗೂ ಅವಕಾಶ ದೊರೆಯುವಂತೆ ಮಾಡಲು ‘2+2+1’ ಫಾರ್ಮುಲಾ ರೂಪಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸಚಿವರಾದವರ ಕಾರ್ಯವೈಖರಿಯನ್ನು ಹೈಕಮಾಂಡ್ ಮೌಲ್ಯಮಾಪನ ಮಾಡಲಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸದವರ ಸಚಿವ ಸ್ಥಾನವನ್ನು ಹಿಂಪಡೆದು ಅತೃಪ್ತರಿಗೆ ನೀಡಲಾಗುವುದು. ಉಳಿದಂತೆ ಮೊದಲು ಸಚಿವರಾದವರಿಗೆ 2 ವರ್ಷ, ಬಳಿಕ ಸಚಿವರಾದವರಿಗೆ 2 ವರ್ಷದಂತೆ ಅಧಿಕಾರ ಹಂಚಿಕೆ ಮಾಡಿ ಎಲ್ಲರಿಗೂ ಅವಕಾಶ ದೊರೆಯುವಂತೆ ಮಾಡಲಾಗುವುದು ಎಂದು ಹೇಳಿದರು.
ಈ ಮೂಲಕ ‘2+2+1’ ಫಾರ್ಮುಲಾ ಮೊರೆ ಹೋಗಿರುವುದಾಗಿ ಪರೋಕ್ಷವಾಗಿ ಮಾಹಿತಿ ನೀಡಿದರು. ಪ್ರಸ್ತುತ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಎಲ್ಲರಿಗೂ ಒಟ್ಟಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಈ ಬಗ್ಗೆ ಎಲ್ಲರಿಗೂ ಮನವರಿಕೆ ಮಾಡಿಕೊಟ್ಟಿದ್ದು, ಶಾಸಕರು ಹಾಗೂ ಮುಖಂಡರು ಸನ್ನಿವೇಶ ಅರ್ಥ ಮಾಡಿಕೊಂಡಿದ್ದಾರೆ. ಈಗ ಸಚಿವರಾಗುವವರು ಎರಡು ವರ್ಷ ಸಚಿವರಾಗಿ ಇರಲಿದ್ದಾರೆ. ನಂತರ ಇತರರಿಗೆ ಅವಕಾಶ ಮಾಡಿಕೊಡಲಿದ್ದಾರೆ. ಹೀಗಾಗಿ ಎಲ್ಲಾ ಗೊಂದಲಗಳೂ ಬಗೆಹರಿದಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.