
ಕೊಡಗು(ನ.10): ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಕಿಡಿಗೇಡಿಗಳು KSRTC ಬಸ್'ಗೆ ಕಲ್ಲು ತೂರಿದ ಘಟನೆ ನಡೆದಿದೆ.
ಮಡಿಕೇರಿ ತಾಲೂಕಿನ ಗಾಳಿಬೀಡು ಕಾಲೂರು ಕಟ್ಟೆಕಲ್ಲು ಬಳಿ ಈ ಘಟನೆ ನಡೆದಿದ್ದು, ಕೆಎ-09-ಎಫ್ -52 05 ನಂಬರಿನ ಬಸ್ ಗಾಜುಗಳು ಪುಡಿ-ಪುಡಿಯಾಗಿವೆ. ಎರಡು ಬೈಕ್'ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆ ಬದಿ ನಿಂತಿದ್ದ ಬಸ್ ಮುಂಭಾಗದ ಗಾಜುನ್ನು ಧ್ವಂಸಗೊಳಿಸಿದ್ದಾರೆ. ಅದೃಷ್ಟವಶಾತ್ ಬಸ್'ನಲ್ಲಿ ಯಾರೂ ಇರಲಿಲ್ಲ. ಹಾಗಾಗಿ ಯಾರಿಗೂ ಗಾಯಾಳುಗಳಾಗಿರುವ ಕುರಿತಂತೆ ವರದಿಯಾಗಿಲ್ಲ.
ಮತ್ತೊಂದೆಡೆ ಮಡಿಕೇರಿ ತಾಲೂಕಿನ ಕಡಗದಾಳು ಬಳಿ ಕಿಡಿಗೇಡಿಗಳು ರಸ್ತೆಗೆ ಅಡ್ಡಲಾಗಿ ಮರ ಉರುಳಿಸಿ ರಸ್ತೆಸಂಚಾರ ಅಸ್ತವ್ಯಸ್ತಗೊಳಿಸಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕಾಗಮಿಸಿ, ರಸ್ತೆ ತೆರವು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.