ಹರಿಯಾಣ ನಮ್ದು ಅಂತಿದ್ದಾರೆ ಖಟ್ಟರ್: ಮೀಟ್ ಆಗಲು ಹೋದರು ಗವರ್ನರ್!

By Web Desk  |  First Published Oct 24, 2019, 6:04 PM IST

ಹರಿಯಾಣದಲ್ಲಿ ಸರ್ಕಾರ ರಚನೆಗೆ ಮುಂದಾದ  ಮನೋಹರ್‌ಲಾಲ್ ಖಟ್ಟರ್| ಬಹುಮತ ಸಾಬೀತಪಡಿಸಲು ಸಿದ್ಧ ಅಂತಿದ್ದಾರೆ ಹರಿಯಾಣ ಸಿಎಂ| ದುಷ್ಯಂತ್ ಚೌಟಾಲಾ ಅವರ ಜೆಜೆಪಿ ಪಕ್ಷದ ಬೆಂಬಲದ ಭರವಸೆಯಲ್ಲಿ ಖಟ್ಟರ್| ಹರಿಯಾಣದಲ್ಲಿ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬಿಎಜಪಿ| ಬಹುಮತ ಸಾಬೀತಿಗೆ 46 ಸೀಟುಗಳ ಅವಶ್ಯಕತೆ| ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ನೀಡ್ತಾರಾ ಪಕ್ಷೇತರರು?|


ಚಂಡೀಘಡ್(ಅ.24): ಮಹತ್ವದ ಬೆಳವಣಿಗೆಯೊಂದರಲ್ಲಿ ಹರಿಯಾಣದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದಾಗಿ ಸಿಎಂ ಮನೋಹರ್‌ಲಾಲ್ ಖಟ್ಟರ್ ಘೋಷಿಸಿದ್ದಾರೆ. ಜೆಜೆಪಿ ಬೆಂಬಲದ ಭರವಸೆ ವ್ಯಕ್ತಪಡಿಸಿರುವ ಖಟ್ಟರ್, ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ದುಷ್ಯಂತ್: ದೋಸ್ತಿ ಬಯಸಿದೆ ಕಾಂಗ್ರೆಸ್!

Tap to resize

Latest Videos

 ಹರಿಯಾಣದಲ್ಲಿ ಬಹುಮತ ಸಾಬೀತಪಡಿಸಲು 46 ಕ್ಷೇತ್ರಗಳ ಅವಶ್ಯಕತೆಯಿದ್ದು, ಬಿಜೆಪಿ ಒಟ್ಟು 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಪ್ರತಿಪಕ್ಷ ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ 10 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ.

ಶಿವಸೇನೆ'ಮಹಾ'ಬೇಡಿಕೆ: ಸಾಧ್ಯನಾ ಆದಿತ್ಯ ಠಾಕ್ರೆ ಸಿಎಂ ಆಗೋಕೆ?

ಹರಿಯಾಣ, ಮಹಾರಾಷ್ಟ್ರ ಸದ್ಯದ ಬಲಾಬಲ: ಇದು ಚುನಾವಣಾ ರಣರಂಗದ ಕುತೂಹಲ!

ಜೆಜೆಪಿ-ಕಾಂಗ್ರೆಸ್ ಮೈತ್ರಿ ಮಾತುಗಳು ಕೇಳಿ ಬರುತ್ತಿದ್ದರೂ, ಚೌಟಾಲಾ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಸಿಎಂ ಮನೋಹರ್‌ಲಾಲ್ ಖಟ್ಟರ್ ಭರವಸೆ ವ್ಯಕ್ತಪಡಿಸಿದ್ದಾರೆ.

Sources: Haryana Chief Minister and BJP leader Manohar Lal Khattar to meet Governor Satyadev Narayan Arya later this evening, to stake his claim to form the govt in the state. (file pic) pic.twitter.com/BWgDpkuVjN

— ANI (@ANI)

ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಎಸ್.ಎನ್. ಆರ್ಯಾ ಅವರನ್ನು ಭೇಟಿ ಮಾಡಲಿರುವ ಖಟ್ಟರ್, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಹೇಳಲಾಗಿದೆ.

ನನಗೆ ಸಿಎಂ ಪಟ್ಟ ಕೊಡುವ ಪಕ್ಷಕ್ಕೆ ಬೆಂಬಲ: ಚೌಟಾಲಾ ಒಲಿಸಲು ಬಿಜೆಪಿ-ಕಾಂಗ್ರೆಸ್ ಹಂಬಲ!

ಖಟ್ಟರ್ ಕರೆಸಿಕೊಂಡ ಶಾ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಭರಾಲಾ ರಾಜೀನಾಮೆ!

ಅಲ್ಲದೇ ಪಕ್ಷೇತರರು ಕೂಡ ಸರ್ಕಾರ ರಚನೆಯಲ್ಲಿ ಬಿಜೆಪಿಗೆ ಸಹಾಯ ಮಾಡುವ ಸಾಧ್ಯತೆಯಿದ್ದು, ಸರಳ ಬಹುಮತವನ್ನು ಪಡೆಯುವ ವಿಶ್ವಾಸದಲ್ಲಿ ಸಿಎಂ ಮನೋಹರ್‌ಲಾಲ್ ಖಟ್ಟರ್ ಇದ್ದಾರೆ.

ಬಿಎಸ್‌ವೈ ನೀರು ಕೊಡ್ತಿನಿ ಎಂದಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!

click me!