
ಬೆಂಗಳೂರು (ಅ.19): ಕೆ.ಆರ್.ಪೇಟೆ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಮೇಲೆ ಶಾಸಕ ನಾರಯಾಣಗೌಡ ಹಲ್ಲೆ ನಡೆಸಿದ್ದಾರೆ.
ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಾಸಕ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿದ್ದರು.
ಈ ವೇಳೆ ಕಾರ್ಯಪಾಲಕ ಅಭಿಯಂತರ ನಾರಾಯಣ ಮತ್ತು ಶಾಸಕ ನಾರಾಣಯಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಶಾಸಕ ನಾರಾಯಣಗೌಡ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಇಷ್ಟೆಕ್ಕೆ ಸುಮ್ಮನಾಗದ ಶಾಸಕ ನಾರಾಯಣಗೌಡ ಹೇಮಗಿರಿ ನಾಲೆ ಮತ್ತು ಮಂದಗೆರೆ ನಾಲೆಗಳಿಗೆ ನೀರು ಹರಿಸದಿದ್ದರೆ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.