
ಬೆಂಗಳೂರು (ಮಾ.19): ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಪರವಾಗಿ ಶಾಸಕ ಕುಣಿಗಲ್ ರಂಗನಾಥ್ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡಿದ ರಂಗನಾಥ್, ಗೃಹಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತದೆ. ಗೃಹ ಲಕ್ಷ್ಮಿ ಯೋಜನೆಗೆ ವಿರೋಧಿಸಿದರೆ ಜನರ ಶಾಪ ತಟ್ಟುತ್ತದೆ. ಮುಂದೆ ಸರ್ಕಾರ ಬದಲಾವಣೆ ಆದರೂ ಗ್ಯಾರಂಟಿ ಯೋಜನೆ ನಿಲ್ಲಿಸಲು ಅಸಾಧ್ಯ. 2028 ರಲ್ಲಿ ನಮ್ಮ ಸರ್ಕಾರ ಬಂದರೆ ಗೃಹಲಕ್ಷ್ಮೀ ಹಣವನ್ನು 2 ಸಾವಿರದಿಂದ 4 ಸಾವಿರಕ್ಕೆ ಏರಿಕೆ ಮಾಡಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಜನಗಣತಿ ಆಧಾರ ಮೇಲೆ ಕ್ಷೇತ್ರಪುನರ್ ವಿಂಗಡಣೆಗೆ ವಿರೋಧ ವ್ಯಕ್ತಪಡಿಸಿದ ರಂಗನಾಥ್, ಕೇಂದ್ರ ಸರ್ಕಾರದ ಕುಟುಂಬ ಕಲ್ಯಾಣ ಯೋಜನೆ ಜಾರಿ ಮಾಡಿದ್ದೇವೆ. ದಕ್ಷಿಣ ಭಾರತದ ರಾಜ್ಯಗಳು ಜಾರಿಮಾಡಿವೆ. ಮನೆಗೆ ಎರಡೇ ಮಕ್ಕಳ ಮೂಲಕ ಕಡಿವಾಣ ಹಾಕಿದ್ದೇವೆ. ಆದರೆ, ಕೇಂದ್ರ ಸರ್ಕಾರ ಜನಗಣತಿ ಆಧಾರ ಮೇಲೆ ಕ್ಷೇತ್ರ ವಿಂಗಡಿಸುತ್ತಿದೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಲಾಭವಾಗಲಿದೆ. ಕೇಂದ್ರ ಸರ್ಕಾರ ಜನಗಣತಿ ಆಧಾರ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ.
ಪಂಚ ಗ್ಯಾರಂಟಿ ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ
ಈ ವೇಳೆ ಸ್ವ ಪಕ್ಷದ ಸಚಿವರ ವಿರುದ್ಧ ರಂಗನಾಥ ಅಸಮಧಾನ ವ್ಯಕ್ತಪಡಿಸಿದರು. ಸಚಿವ ರಾಜಣ್ಣ ಮೇಲೆ ಆಕ್ರೋಶ ಹೊರ ಹಾಕಿದ ರಂಗನಾಥ್, ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಸಹಕಾರ ನೀಡುತ್ತಾರೆ. ಅಭಿವೃದ್ಧಿಗೆ ಸಹಕಾರ ನೀಡುತ್ತಾರೆ. ಆದರೆ, ಸಹಕಾರ ಸಚಿವರ ಸಹಕಾರ ಸಿಗುತ್ತಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜಣ್ಣ ವಿರುದ್ಧ ರಂಗನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ವಾರದಲ್ಲಿ ಯಜಮಾನಿಯರ ಖಾತೆಗೆ ಹಣ: ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.