ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್‌ ಎಚ್ಚರಿಕೆ!

Published : Sep 10, 2018, 07:07 AM ISTUpdated : Sep 19, 2018, 09:17 AM IST
ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್‌ ಎಚ್ಚರಿಕೆ!

ಸಾರಾಂಶ

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕಲಹ ಸದ್ಯಕ್ಕೆ ತಣ್ಣಗಾಗಿದ್ದು ಇದೇ ವೇಳೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಭಿಮಾನಕ್ಕೆ ಧಕ್ಕೆಯಾದಲ್ಲಿ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ :  ಸದ್ಯ ಜಾರಕಿಹೊಳಿ ಸಹೋದರರ ಜೊತೆಗಿನ ಕಲಹ ತಣ್ಣಗಾದಂತೆ ಕಂದು ಬಂದಿದ್ದು ಇದೇ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ನಮ್ಮ ಕ್ಷೇತ್ರದ ವಿಚಾರಕ್ಕೆ ಬಂದರೆ ನಾವು ಸುಮ್ಮನಿರುವುದಿಲ್ಲ. ಅದೊಂದು ಕೆಟ್ಟ ಘಟನೆ ಎಂದು ಮರೆತು ಬಿಡಿ ಎಂದು ಸಮಾಜಕ್ಕೆ‌ ಮನವಿ ಮಾಡುತ್ತೇನೆ ಎಂದಿದ್ದಾರೆ. 

ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಾತ್ರ ಸಹಿಸುವುದಿಲ್ಲ, ಅನ್ಯಾಯ ಮಾಡುವುದು ಎಷ್ಟು ಕೆಟ್ಟದ್ದೋ , ಅನ್ಯಾಯವನ್ನು  ಸಹಿಸುವುದು ಕೂಡ ಅಷ್ಟೆ ಕೆಟ್ಟದ್ದು ಎಂದು ಕೂಡಲಸಂಗಮದಲ್ಲಿ ನಡೆದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.

ಕಲಿಯುಗದಲ್ಲಿ ಚುನಾವಣೆಗಳೆ ಯುದ್ಧಗಳಾಗಿವೆ ಎಂದು ಜಾರಕಿಹೊಳಿ ಬ್ರದರ್ಸ್ ಹಾಗೂ ತಮ್ಮ ನಡುವೆ ನಡೆದ ಘಟನೆ ಬಗ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 

ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆ ಸಂಬಂಧ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ತೀವ್ರ ಕಲಹ ಏರ್ಪಟ್ಟು ಬಳಿಕ ಸಂಧಾನದ ಮೂಲಕ ಬಗೆಹರಿಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ