
ಚೆನ್ನೈ (ಫೆ. 15): ಓ.ಪಿ. ಪನ್ನೀರ್ ಸೆಲ್ವಂ ಬಣದೊಂದಿಗೆ ಗುರುತಿಸಿಕೊಂಡಿರುವ ಅಣ್ಣಾ ಡಿಎಂಕೆ ಶಾಸಕ ಶರವಣನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಹಾಗೂ ಪಳನಿಸ್ವಾಮಿ ವಿರುದ್ಧ ಅಪಹರಣದ ಪ್ರಕರಣ ದಾಖಲಿಸಿದ್ದಾರೆ.
ಚೆನ್ನೈನ ಕೊವತ್ತೂರು ಠಾಣೆಯಲ್ಲಿ ದೂರು ನೀಡಿರುವ ಶರವಣನ್, ಶಶಿಕಲಾ ಅವರು ಎಐಎಡಿಎಂಕೆ ಶಾಸಕರನ್ನು ಅಪಹರಿಸಿ ಗೋಲ್ಡನ್ ಬೇ ರೆಸಾರ್ಟ್’ನಲ್ಲಿ ಕೂಡಿಟ್ಟಿದ್ದರೆಂದು ಆರೋಪಿಸಿದ್ದಾರೆ.
ಎಫ್’ಐಆರ್ ದಾಖಲಿಸಿದ ಬಳಿಕ ರೆಸಾರ್ಟ್ಗೆ ಪೊಲೀಸರು ರೆಸಾರ್ಟ್’ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಪ್ರತಿಯೊಬ್ಬ ಶಾಸಕರಿಂದ ಪ್ರತ್ಯೇಕವಾಗಿ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.