
ಬೆಂಗಳೂರು: ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದ್ದು ಕಾಂಗ್ರೆಸ್‌ನ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ‘ಬಾಂಬ್’ ಸಿಡಿಸಿದ್ದಾರೆ.
ಈ ಬಗ್ಗೆ ಬುಧವಾರ ರಾತ್ರಿ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಅವರು, ಆರು ಬಾರಿ ಶಾಸಕನಾಗಿರುವ ನನಗೆ ಪದವಿ-ಸಚಿವ ಸ್ಥಾನದ ಆಸೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡಿರುವ ನಾನು ಅವರಿಗೆ ಕೊಟ್ಟಿರುವ ಮಾತಿನಂತೆ ಎಷ್ಟೇ ಅವಮಾನ ಆಗಿದ್ದರೂ ಸಹಿಸಿಕೊಂಡು ಪಕ್ಷದಲ್ಲಿದ್ದೇನೆ. ಇದೀಗ ಸರ್ಕಾರದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪಕ್ಷ ತೊರೆಯುತ್ತಿದ್ದೇನೆ ಎಂದು ಹೇಳಿದರು.
ಈ ಭಾಗದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ ಖರ್ಗೆ ಮೂರು ಜನ ಒಂದಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಮೂಲೆಗುಂಪು ಮಾಡಿದ್ದಾರೆ. ಅವರಿಗೆ ಉತ್ತರ ನೀಡಲು ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸೇರಿ ಅವರನ್ನು ಸಮರ್ಥವಾಗಿ ಎದುರಿಸುತ್ತೇನೆ. ಈಗಾಗಲೇ ಒಂದು ಹಂತದ ಮಾತುಕತೆ ಮುಗಿಸಿದ್ದು, ಬಿಜೆಪಿ ಸೇರಿ ನನ್ನ ಸಂಘಟನಾ ಸಾಮರ್ಥ್ಯ ತೋರಿಸಿಕೊಡುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.