
ಚಿಕ್ಕಮಗಳೂರು[ಮೇ.31]: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಂಭ್ರಮಾಚರಣೆಗೆ ದೇಶಾದ್ಯಂತ ಸುತ್ತಿ ಫುಲ್ ಎಂಜಾಯ್ ಮಾಡಿದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಫುಡ್ ಪಾಯ್ಸನ್‍ನಿಂದ ಆಸ್ಪತ್ರೆ ಸೇರಿದ್ದಾರೆ.
ಚುನಾವಣಾ ಫಲಿತಾಂಶ ಬಂದಾಗಿನಿಂದ ಬಿಜೆಪಿ ಕೈಗೆ ಸಿಗದಂತೆ ಈಗಲ್ ಟರ್ನ್, ಹೈದ್ರಾಬಾದ್, ಬೆಂಗಳೂರು ಅಂತೆಲ್ಲಾ ರೆಸಾರ್ಟ್ ಸುತ್ತಿದ್ದ ರಾಜೇಗೌಡ ಕ್ಷೇತ್ರಕ್ಕೆ ಬಂದ ಮೇಲೂ ಹತ್ತಾರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ ಊಟದಲ್ಲಿ ವ್ಯತ್ಯಾಸವಾಗಿ ಫುಡ್ ಪಾಯ್ಸನ್ ಆಗಿದೆ. ತಕ್ಷಣ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಎರಡು ದಿನದ ಹಿಂದೆಯೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸುಧಾರಿಸಿದ್ದು ಇಂದು ಸಂಜೆ ಡಿಸ್ಚಾರ್ಜ್ ಆಗಿ ಶೃಂಗೇರಿಗೆ ಹಿಂತಿರುಗುವ ಸಾಧ್ಯತೆಯಿದೆ.
ಇದನ್ನೂ ಓದಿ : ರಾಮಲಿಂಗಾರೆಡ್ಡಿಗಿಲ್ಲ ಸಚಿವ ಸ್ಥಾನ ?
ಈ ಸುದ್ದಿಯನ್ನು ಓದಿ : ಉಪ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ : ವಿಪಕ್ಷಗಳ ಕೈ ಮೇಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.