ಸಿ.ಆರ್.ಮನೋಹರ್ ಸರ್ಕಾರಿ ಭೂಮಿ ಒತ್ತುವರಿ ಮಾಡಿಲ್ಲ

Published : Sep 24, 2016, 01:01 PM ISTUpdated : Apr 11, 2018, 01:01 PM IST
ಸಿ.ಆರ್.ಮನೋಹರ್ ಸರ್ಕಾರಿ ಭೂಮಿ ಒತ್ತುವರಿ ಮಾಡಿಲ್ಲ

ಸಾರಾಂಶ

ಆನೇಕಲ್(ಸೆ.24): ವಿಧಾನ ಪರಿಷತ್ ಸದಸ್ಯ ಸಿ.ಆರ್​. ಮನೋಹರ್​ ಅವರು ಯಾವುದೇ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್​ ಸ್ಪಷ್ಟನೆ ನೀಡಿದ್ದಾರೆ.

ಬಿ.ಎಚ್.ಎ.ಎಲ್ ಬಡಾವಣೆ ಮಾಡಲು ಸಿ.ಆರ್. ಮನೋಹರ್ ಅವರು ಆನೇಕಲ್​ನ ಅಡಿಗಾರ ಕಲ್ಲಹಳ್ಳಿ ಬಳಿ  ಒತ್ತುವರಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ವಿ.ಶಂಕರ್ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

ರೈತರು ಕೆಲವರಿಗೆ ಮಾರಾಟ ಮಾಡಿದ್ದಾರೆ. ಅದರಲ್ಲಿ ವಿಧಾನ ಪರಿಷತ್ ಸದಸ್ಯ ಮನೋಹರ್ ಅವರು ಖರೀದಿ ಮಾಡಿ ಕಾನೂನು ರೀತಿಯಲ್ಲಿ ಬಡಾವಣೆಗೆ ನಿರ್ಮಿಸಿದ್ದಾರೆ' ಎಂದು ತಿಳಿಸಿದರು.

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅಡಿಗಾರ ಕಲ್ಲಹಳ್ಳಿಯಲ್ಲಿ ಸರ್ವೆ ನಂ 47 ರಲ್ಲಿ ಭೂಮಿ ಒತ್ತುವರಿ ಬಗ್ಗೆ ಇಂದು ಜಿಲ್ಲಾಧಿಕಾರಿಗಳ ವಿ ಶಂಕರ್ ಅವರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ನಟೇಶ್, ಆನೇಕಲ್ ತಹಶೀಲ್ದಾರ್ ಮತ್ತು ಜಿಲ್ಲಾ ಮೋಜಿಣಿದಾರರು ಅಳತೆ ಕಾರ್ಯ ನಡೆಸಿದ ಬಳಿಕ ಸ್ಪಷ್ಟನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!