
ತಿರುವನಂತಪುರ(ಅ.17): ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರತಿಭಟನಾಕಾರರು ನಿಳಕ್ಕಲ್ ನಲ್ಲಿ ಮಹಿಳೆಯರು ಮತ್ತು ವರದಿಗಾರರ ಮೇಲೆ ದಾಳಿ ನಡೆಸಿದ್ದಲ್ಲದೇ ಹಲವು ವಾಹನಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ, ಸಿಎನ್ಎನ್ ನ್ಯೂಸ್ 18, ಆಜ್ ತಕ್ ಮತ್ತು ನ್ಯೂಸ್ ಮಿನಿಟ್ ಮಹಿಳಾ ಪತ್ರಕರ್ತೆಯರ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಅಲ್ಲದೆ ಅವರು ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಅಯ್ಯಪ್ಪ ಹೆಸರಲ್ಲಿ ಘೋಷಣೆ ಕೂಗುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಹಿಳೆಯರು ಮತ್ತು ಪತ್ರಕರ್ತೆಯರ ಮೇಲೆ ದಾಳಿ ನಡೆಸಿದ್ದು, ವಾಹನಗಳನ್ನು ಧ್ವಂಸಗೊಳಿಸಿದ್ದಾರೆ.
ನಿಳಕ್ಕಲ್ ಶಬರಿಮಲೆಯಿಂದ 20 ಕಿ.ಮೀ. ದೂರದಲ್ಲಿದ್ದು, ಪಂಪಾ ನದಿ ತಲುಪಲು ಇದೊಂದೇ ಮಾರ್ಗ. ಹೀಗಾಗಿ ಪ್ರತಿಭಟನಾಕಾರರು ಇಲ್ಲಿ ಜಮಾಯಿಸಿ ಮಹಿಳೆಯರು ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ತಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.