
ನವದೆಹಲಿ (ಸೆ.01): ದೇಶದ ದೊಡ್ಡ ದೊಡ್ಡ ನದಿಗಳನ್ನು ಜೋಡಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ತಿಂಗಳೊಳಗಾಗಿ ಆರಂಭವಾಗಲಿದೆ. ಬರಗಾಲ ಹಾಗೂ ಪ್ರವಾಹ ತಡೆಗಟ್ಟುವ ಉದ್ದೇಶದಿಂದ ನದಿ ಜೋಡಣೆ ಯೋಜನೆ ಮಾಡಲಾಗುತ್ತಿದೆ.
ಜನರ ಜೀವನದಿಯಾಗಿರುವ ಗಂಗಾ ಸೇರಿದಂತೆ ಸುಮಾರು 60 ನದಿಗಳನ್ನು ಜೋಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಖುದ್ದಾಗಿ ಆಸಕ್ತಿ ವಹಿಸಿ ಮೊದಲ ಹಂತದ ಯೋಜನೆಗೆ ಅನುಮತಿ ನೀಡಿದ್ದಾರೆ. ಪರಿಸರವಾದಿಗಳು, ಹುಲಿ ಪ್ರೇಮಿಗಳ ವಿರೋಧದ ನಡುವೆಯೂ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.
ನದಿ ಜೋಡಣೆ ಯೋಜನೆ ಪ್ರಸ್ತಾವವನ್ನು 2002 ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮಾಡಿತ್ತು. ಆದರೆ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಗಳು ಕ್ಯಾತೆ ತೆಗೆದಿದ್ದರಿಂದ ಅದನ್ನು ಅಲ್ಲಿಯೇ ಕೈಬಿಡಲಾಗಿತ್ತು. ಈ ಬಾರಿ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮಾತುಕತೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.