
ನವದೆಹಲಿ (ಡಿ.01): 500, 1000 ನೋಟ್ ನಿಷೇಧದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಟಿಆರ್ಪಿ ರಾಜಕೀಯ ಮಾಡುತ್ತಿದ್ದಾರೆ. ಪ್ರಧಾನಿಯವರ ಅದಕ್ಷತೆ ಪರಿಣಾಮವಾಗಿ ದೇಶಕ್ಕೆ ಹಾನಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮುಂದುವರೆದು, ತಮ್ಮ ಘನತೆಗೆ ಧಕ್ಕೆ ಬರದಂತೆ ಪ್ರಧಾನಿ ಟಿಆರ್’ಪಿ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿದ್ದಾರೆ ಎಂದು ರಾಹುಲ್ ಆಪಾದಿಸಿದ್ದಾರೆ.
ಯುಪಿಎ ಅಧಿಕಾರ ಅವಧಿಯಲ್ಲಿ ಈ ತರಹದ ಆಡಳಿತ ಯಾರೂ ಮಾಡಿರಲಿಲ್ಲ ಎಂದು ರಾಹುಲ್ ಗಾಂಧಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.