
ಮೀರಠ್ (ಫೆ.04): ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಯನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ SCAM (ಹಗರಣಗಳಿಗೆ) ಹೊಸ ವ್ಯಾಖ್ಯಾನವನ್ನು ಕೊಟ್ಟಿದ್ದಾರೆ.
ಸ್ಕಾಮ್ ಎಂದರೆ S- ಸಮಾಜವಾದಿ ಪಕ್ಷ, C- ಕಾಂಗ್ರೆಸ್, A-ಆಖಿಲೇಶ್ ಯಾದವ್ M-ಮಾಯಾವತಿ ಎಂದು ಮೀರಠ್’ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದಾರೆ.
ಜಗತ್ತಿನಾದ್ಯಂತ ಸರ್ಜಿಕಲ್ ದಾಳಿ ಬಗ್ಗೆ ವಿಶ್ಲೇಷಣೆ, ಅಧ್ಯಯನ, ಪ್ರಶಂಸೆ ಹಾಗೂ ಚರ್ಚೆಗಳಾಗುತ್ತಿದೆ. ಆದರೆ ಭಾರತದಲ್ಲೇ ಕೆಲವರು ಅದರ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಿದ್ದಾರೆ. ಅಂಥವರ ಕೈಗೆ ಎಂದಿಗೂ ಅಧಿಕಾರ ನೀಡಬಾರದೆಂದು ಮೊದಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬದಲಾವಣೆ ಕಾಣಬೇಕಾದರೆ ಮೊದಲು ಇಲ್ಲಿನ ಸರ್ಕಾರವನ್ನು ಬದಲಿಸಬೇಕು ಎಂದು ಮೋದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.