ಇಂದು ಮೋದಿ ಚೀನಾಕ್ಕೆ

Published : Sep 03, 2017, 10:33 AM ISTUpdated : Apr 11, 2018, 12:58 PM IST
ಇಂದು ಮೋದಿ ಚೀನಾಕ್ಕೆ

ಸಾರಾಂಶ

ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸಲು ಭಾನುವಾರದಿಂದ ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದಾರೆ. ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್‌'ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ.

ಬೀಜಿಂಗ್(ಸೆ.03): ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸಲು ಭಾನುವಾರದಿಂದ ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದಾರೆ. ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್‌'ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ.

ಮೂರು ದಿನಗಳ ಸಮಾವೇಶದ ನಡುವೆ, ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸುವ ಸಾಧ್ಯತೆಯಿದೆ. ಸಮಾವೇಶದಲ್ಲಿ ಬ್ರಿಕ್ಸ್ ಸದಸ್ಯ ರಾಷ್ಟ್ರಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ನಾಯಕರು ಭಾಗವಹಿಸಲಿದ್ದಾರೆ. ಇಂತಹ ಸಮಾವೇಶಗಳ ಸಂದರ್ಭ ದ್ವಿಪಕ್ಷೀಯ ಮಾತುಕತೆ ನಡೆಯುವುದು ಸಾಮಾನ್ಯ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಸಮಯ ದೊರೆತರೆ, ಮಾತುಕತೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ವರ್ಷದ ಸಮಾವೇಶಕ್ಕೆ ಈಜಿಪ್ಟ್, ಗಿನಿ, ಮೆಕ್ಸಿಕೊ, ತಜಕಿಸ್ತಾನ ಮತ್ತು ಥಾಯ್ಲೆಂಡ್ ದೇಶಗಳನ್ನು ಚೀನಾ ‘ಬ್ರಿಕ್ಸ್ ಪ್ಲಸ್’ ಪರಿಕಲ್ಪನೆಯಡಿ ಆಹ್ವಾನಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್