
ಮುಂಬೈ(ಜೂ.16): ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳ ಬಗ್ಗೆ ಎನ್ ಡಿಎ ಮಿತ್ರಪಕ್ಷ ಶಿವಸೇನೆ ಮೋದಿ ಸರ್ಕಾರದತ್ತ ಬೊಟ್ಟು ಮಾಡಿದೆ. ಕಾಶ್ಮೀರ ಅಶಾಂತಿಯ ಬೀಡಾಗಲು ಮೋದಿ ಸರ್ಕಾರದ ಅಪಕ್ವ ನೀತಿಗಳೇ ಕಾರಣ ಎಂದು ಶಿವಸೇನೆ ದೂರಿದೆ.
ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆಯುಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಂಜಾನ್ ತಿಂಗಳಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನಡೆಸದಿರಲು ನಿರ್ಧರಿಸಿದ್ದರ ಬಗ್ಗೆ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಈ ನಿರ್ಧಾರದಿಂದ ಪಾಕಿಸ್ತಾನ ಅನುಚಿತ ಲಾಭ ಪಡೆಯಲು ಯತ್ನಿಸಿದೆ ಎಂದು ಶಿವಸೇನೆ ಆರೋಪಿಸಿದೆ.
ಭಯೋತ್ಪಾದಕರು ನಡೆಸಿರುವ ರಕ್ತಪಾತಕ್ಕೆ ಕೇಂದ್ರ ಸರ್ಕಾರದ ನಿರ್ಧಾರವೇ ಕಾರಣವಾಗಿದೆ. ನಮ್ಮ ಸರ್ಕಾರ ರಂಜಾನ್ ತಿಂಗಳಲ್ಲಿ ಸೇನಾ ದಾಳಿ ನಡೆಸದಿರಲು ತೀರ್ಮಾನಿಸಿತ್ತು. ಆದರೆ ಪಾಕಿಸ್ತಾನ ಅದಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ ಎಂದು ಸಂಪಾದಕೀಯದಲ್ಲಿ ಕಿಡಿಕಾರಲಾಗಿದೆ. ಕಾಶ್ಮೀರದಲ್ಲಿ ರಕ್ತಪಾತ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.