
ರಾಯ್‌ಪುರ: ದೇಶದ ಶೇ.40ರಷ್ಟುಮಂದಿಯನ್ನು ಒಳಗೊಳ್ಳುವ ಆರೋಗ್ಯ ವಿಮೆಯಾದ ಮೋದಿಕೇರ್ ಯೋಜನೆಯು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಜಾರಿಗೆ ಬರಲಿದೆ.
ಅಂದು ಸಂಸತ್ತಿನಲ್ಲಿ ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಛತ್ತೀಸ್‌ಗಢಕ್ಕೆ ತೆರಳಿ, ತಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಮೋದಿಕೇರ್ ಮತ್ತು ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ರಕ್ಷಣೆ ಮತ್ತು ವನಧನ ಯೋಜನೆಗಳಿಗೆ ಚಾಲನೆ ನೀಡಿಲಿದ್ದಾರೆ.
ದೇಶಾದ್ಯಂತ ಜಾರಿಗೊಳಿಸಲು ನಿರ್ಧರಿಸಲಾಗಿದ್ದ ಮೋದಿಕೇರ್‌ಗೆ ಇತ್ತೀಚೆಗಷ್ಟೇ ಸಂಸತ್ತು ಅನುಮೋದನೆ ನೀಡಿದ್ದು, ಈ ಯೋಜನೆಗೆ ಛತ್ತೀಸ್‌ಗಢದ ಬಿಜಾಪುರದಲ್ಲಿ ಚಾಲನೆ ಪಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.