ದಾವೋಸ್‌‌ನಲ್ಲಿ ನೀರವ್ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ಮೋದಿ

Published : Feb 21, 2018, 03:32 PM ISTUpdated : Apr 11, 2018, 12:42 PM IST
ದಾವೋಸ್‌‌ನಲ್ಲಿ ನೀರವ್ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ಮೋದಿ

ಸಾರಾಂಶ

' ಸ್ವಿಜರ್ಲ್ಯಾಂಡ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಿಎನ್‌ಬಿ ಹಗರಣ ಕಳಂಕಿತ ನೀರವ್ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದು ಹೌದು,' ಎಂದು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ.

ಪಾಟ್ನಾ:' ಸ್ವಿಜರ್ಲ್ಯಾಂಡ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಿಎನ್‌ಬಿ ಹಗರಣ ಕಳಂಕಿತ ನೀರವ್ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದು ಹೌದು,' ಎಂದು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ನೀರವ್ ಅವರೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಂಡಿಲ್ಲವೆಂದು, ಪ್ರಧಾನಿ ಕಚೇರಿ ಹೇಳಿದ್ದು, ಇದು ಸತ್ಯಕ್ಕೆ ದೂರವಾದದ್ದು ಎನ್ನುವ ಮೂಲಕ ಬಿಜೆಪಿಯ ಅಸಂತೃಪ್ತ ಸಂಸದ ಸಿನ್ಹಾ ಟ್ವೀಟ್ ಮೂಲಕ ಮಗದೊಮ್ಮೆ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರಣಿ ಟ್ವೀಟ್ ಮಾಡಿದ ಸಿನ್ಹಾ, 'ಪಾಟ್ನಾ ವಿವಿಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳಲು, ಆ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಸಂಸದನಾದ ನನಗೇ ಅನುಮತಿ ನೀಡಿರಲಿಲ್ಲ. ಆದರೆ, ಕ್ರಿಮಿನಲ್‌ನೊಂದಿಗೆ ಮೋದಿ ವೇದಿಕೆ ಶೇರ್ ಮಾಡಿಕೊಂಡಿದ್ದಾರೆ,' ಎನ್ನುವ ಅರ್ಥದಲ್ಲಿ ಕುಹಕವಾಗಿ ಹೇಳಿದ್ದಾರೆ.

ದಾವೋಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಸದಾ ಜಾಗೃತರಾಗಿರುವ ಪ್ರಧಾನಿ ಆಗ ನಿದ್ರಿಸುತ್ತಿದ್ದರೇ, ಎಂದು ಕೇಳಿದ್ದಾರೆ.

 

ಫೋಟೋ ಕ್ರೆಡಿಟ್: ಸೋಷಿಯಲ್ ಮೀಡಿಯಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್