ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತವರಿಗೆ ಮೋದಿ ಭೇಟಿ: ಒಂದೇ ತಿಂಗಳಲ್ಲಿ 3ನೇ ಬಾರಿಗೆ ಭೇಟಿ

Published : Oct 22, 2017, 10:31 AM ISTUpdated : Apr 11, 2018, 01:07 PM IST
ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತವರಿಗೆ ಮೋದಿ ಭೇಟಿ: ಒಂದೇ ತಿಂಗಳಲ್ಲಿ 3ನೇ ಬಾರಿಗೆ ಭೇಟಿ

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ತಿಂಗಳು ಮೂರನೇ ಬಾರಿಗೆ  ಗುಜರಾತ್'ಗೆ  ಭೇಟಿ ನೀಡಲಿದ್ದಾರೆ. ಹಲವು ಯೋಜನೆಗಳನ್ನು ರಾಜ್ಯಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಅವರು ತಮ್ಮ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಇದು 19ನೇ ಬಾರಿ.

ಅಹಮದಾಬಾದ್(ಅ.22): ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ತಿಂಗಳು ಮೂರನೇ ಬಾರಿಗೆ  ಗುಜರಾತ್'ಗೆ  ಭೇಟಿ ನೀಡಲಿದ್ದಾರೆ. ಹಲವು ಯೋಜನೆಗಳನ್ನು ರಾಜ್ಯಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಅವರು ತಮ್ಮ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಇದು 19ನೇ ಬಾರಿ.

ಇದು ಈ ತಿಂಗಳಲ್ಲಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಮೂರನೇ ಬಾರಿ. ಗುಜರಾತ್‌'ನ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ ಪ್ರಾಂತಗಳಿಗೆ ಜಲ ಸಂಪರ್ಕ ಕಲ್ಪಿಸುವ ರೊರೊ ಸಮುದ್ರಯಾನ ಸೇವೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ವಡೋದರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುಮಾರು ₹ 1,140 ಕೋಟಿ ವೆಚ್ಚದ ಹಲವು ಯೋಜನೆಗಳಿಗೆ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ. ಆನಂತರ ವಡೋದರಾ ವಿಮಾನ ನಿಲ್ದಾಣದವರೆಗೂ 14 ಕಿ.ಮೀ ರೋಡ್ ಷೋ ನಡೆಸಲಿದ್ದಾರೆ.

ಸೌರಾಷ್ಟ್ರದ ಭಾವಂಗರ್ ಜಿಲ್ಲೆಯ ಘೋಗ ಮತ್ತು ದಕ್ಷಿಣ ಗುಜರಾತ್‌ನ ದಹೇಜ್ಗಳ ಮಧ್ಯೆ ಸಮುದ್ರಯಾನ ಸೇವೆ ಆರಂಭವಾಗಲಿದೆ. ಸಮುದ್ರಯಾನ ಸೇವೆಯಿಂದ ಈ ನಗರಗಳ ನಡುವಣ ಪ್ರಯಾಣದ ಅವಧಿ ಹತ್ತು ಪಟ್ಟು ಕಡಿಮೆ ಆಗಲಿದೆ ಎಂದು ಮೂಲಗಳು ಹೇಳಿವೆ. ಡಿಸೆಂಬರ್‌ ವೇಳೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಮೋದಿ ಈ ಭೇಟಿ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸ್ತಿ ದಾಹಕ್ಕೆ ತಮ್ಮನ ನೆತ್ತರು ಹರಿಸಿದ ಅಣ್ಣ: ಹಸೆಮಣೆ ಏರಬೇಕಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಕಟುಕ ಸಹೋದರ!
ಲಕ್ಕುಂಡಿಗೆ ಶ್ರೀರಾಮನ ಕಾಲದ ಇತಿಹಾಸವಿದೆ, ಆತ ಭೇಟಿ ಕೊಟ್ಟ ಪುಣ್ಯ ಭೂಮಿ: ಇತಿಹಾಸ ತಜ್ಞ ಅಬ್ದುಲ್ ಕಟ್ಟಿಮನಿ