
ಹಾಸನ[ಜು.8] ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಪ್ರಧಾನಿ ನರೇಂದ್ರ ಮೋದಿ ಹಣ ಕೊಡಲು ಸಿದ್ಧರಿದ್ದಾರೆ. ಆದರೆ ರಾಜ್ಯ ಬಿಜೆಪಿಗರು ಅದಕ್ಕೆ ಅಡ್ಡಗಾಲಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆಯಲ್ಲಿ ಮಾತನಾಡಿ, ಕುಮಾರಸ್ವಾಮಿಗೆ ಹೆಸರು ಬರುತ್ತದೆ ಎಂದು ಮೋದಿ ಹಣಕೊಡಲು ರಾಜ್ಯ ಬಿಜೆಪಿಗರು ಬಿಡುತ್ತಿಲ್ಲ. ಸಾಲಮನ್ನಾದಲ್ಲಿ ಒಕ್ಕಲಿಗೇ ಹೆಚ್ಚು ಲಾಭ ಅಂತಾ ಮಾಧ್ಯಮದಲ್ಲಿ ಬರುತ್ತಿದೆ ಹೇಗೆ ಹೇಳುತ್ತಿದ್ದಾರೋ ಗೊತ್ತಿಲ್ಲ. ಎಲ್ಲ ಪ್ರಶ್ನೆಗಳಿಗೂ ಸದನದಲ್ಲಿ ಕುಮಾರಸ್ವಾಮಿ ಉತ್ತರ ನೀಡಲಿದ್ದಾರೆ ಎಂದರು.
ತಮಿಳುನಾಡಿನವರನ್ನು ಕೇಳಿ ನಾವು ಬೆಳೆಯನ್ನು ಬೆಳೆಯಬೇಕಾ! ರಾಜ್ಯದ ರೈತರು ತಮ್ಮ ಜಮೀನಿನಲ್ಲಿ ಯಾವ ಬೆಳೆ ಬೆಳಯಬೇಕು ಎಂದು ತಮಿಳುನಾಡಿನವರನ್ನು ಕೇಳಬೇಕಾ? ಎಂದು ಪ್ರಶ್ನೆ ಮಾಡಿದ ರೇವಣ್ಣ 18 ಲಕ್ಷ ಎಕರೆ ಜಮೀನು ರಾಜ್ಯದ ರೈತರದ್ದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.