ಉತ್ತರ ಪ್ರದೇಶದ ಬಗ್ಗೆ ಪ್ರಧಾನಿ ಮೋದಿ – ಅಮಿತ್ ಶಾ ಆತಂಕ

By Suvarna Web DeskFirst Published Apr 10, 2018, 3:28 PM IST
Highlights

ಉತ್ತರ ಪ್ರದೇಶ ಬಿಜೆಪಿಯಲ್ಲಿ ಇದೀಗ ಎಲ್ಲವೂ ಸರಿಯಿಲ್ಲ ಎನ್ನುವ ವಿಚಾರವೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಲುಪಿದೆ

ಲಕ್ನೋ :  ಉತ್ತರ ಪ್ರದೇಶ ಬಿಜೆಪಿಯಲ್ಲಿ ಇದೀಗ ಎಲ್ಲವೂ ಸರಿಯಿಲ್ಲ ಎನ್ನುವ ವಿಚಾರವೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಲುಪಿದೆ. ಇತ್ತೀಚೆಗಷ್ಟೇ ಉತ್ತರದ ಪ್ರದೇಶದಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿತ್ತು.

ಅಷ್ಟೇ ಅಲ್ಲಿ ನಾಲ್ವರು ದಲಿತ ಸಂಸದರು ಕೂಡ ಇತ್ತೀಚೆಗಷ್ಟೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂಬಂಧ ಇದೀಗ  ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಳಿ ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ಯೋಗಿ ಆದಿತ್ಯನಾಥ್ ಅವರು ದಿಲ್ಲಿಗೆ ಭೇಟಿ ನೀಡಿದ್ದು, ಈ ವೇಳೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಉತ್ತರ ಪ್ರದೇಶದಲ್ಲಿ ಕೆಲವೆಡೆ ಇರುವ ಸಮಸ್ಯೆಗಳ ಕುರಿತು ಪ್ರಸ್ತಾಪ ಮಾಡಿದರು.

ಇದೇ ವೇಳೇ ಯಾಕೆ ಇಂತಹ ಸಮಸ್ಯೆಗಳಾಗುತ್ತಿದೆ ಎಂದು ಕೂಡ ನಾಯಕರು ಪ್ರಶ್ನೆ ಮಾಡಿದ್ದಾರೆ. ಇದೇ ಏಪ್ರಿಲ್ 11 ರಂದು ಅಮಿತ್ ಶಾ ಅವರು ಕೂಡ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಅವಲೋಕನ ನಡೆಸಲಿದ್ದಾರೆ.

click me!