‘ಧರ್ಮಸ್ಥಳದ ಎಲ್ಲ ಬಂಧುಗಳಿಗೆ ನನ್ನ ನಮನ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

Published : Oct 29, 2017, 05:32 PM ISTUpdated : Apr 11, 2018, 01:13 PM IST
‘ಧರ್ಮಸ್ಥಳದ ಎಲ್ಲ ಬಂಧುಗಳಿಗೆ ನನ್ನ ನಮನ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಸಾರಾಂಶ

 ಶ್ರೀಕ್ಷೇತ್ರ ಧರ್ಮಸ್ಥಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಧಾನಮಂತ್ರಿಯೊಬ್ಬರು ಕ್ಷೇತ್ರಕ್ಕೆ ಆಗಮಿಸಿದ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾದರು.  ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಮಾಜಿ ಸಿಎಂ ಯಡಿಯೂರಪ್ಪ, ಉಸ್ತುವಾರಿ ಸಚಿವ ರಮಾನಾಥ ರೈ, ಮೋದಿಯನ್ನು ಸ್ವಾಗತಿಸಿದರು. ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಂಜುನಾಥನಿಗೆ ರುದ್ರಾಭಿಷೇಕ ನೆರವೇರಿಸಿದರು.

ಧರ್ಮಸ್ಥಳ (ಅ.29):  ಶ್ರೀಕ್ಷೇತ್ರ ಧರ್ಮಸ್ಥಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಧಾನಮಂತ್ರಿಯೊಬ್ಬರು ಕ್ಷೇತ್ರಕ್ಕೆ ಆಗಮಿಸಿದ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾದರು.  ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಮಾಜಿ ಸಿಎಂ ಯಡಿಯೂರಪ್ಪ, ಉಸ್ತುವಾರಿ ಸಚಿವ ರಮಾನಾಥ ರೈ, ಮೋದಿಯನ್ನು ಸ್ವಾಗತಿಸಿದರು. ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಂಜುನಾಥನಿಗೆ ರುದ್ರಾಭಿಷೇಕ ನೆರವೇರಿಸಿದರು.

ದೇವಾಲಯದ ಎದುರು ಕಾರಿನಲ್ಲಿ ಇಳಿಯುತ್ತಿದ್ದಂತೆ ಸಾರ್ವಜನಿಕರತ್ತ  ಕೈ ಬೀಸಿದರು. ದೇವಸ್ಥಾನದ ಒಳಗೆ 4 ಅರ್ಚಕರಿಂದ ಮಾತ್ರ ಪೂಜೆ ಮಾಡಲಾಯ್ತು.   ದೇಗುಲದಲ್ಲಿ ಸುಮಾರು 20 ನಿಮಿಷ ಇದ್ದ ಪ್ರಧಾನಿ ರುದ್ರಾಭಿಷೇಕ ಸೇವೆ ಸಲ್ಲಿಸಿ ಮಂಜುನಾಥ ಸ್ವಾಮಿ, ಅಮ್ಮನವರು, ಮಹಾಗಣಪತಿ ಮತ್ತು ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.   ದೇವಾಲಯದ ಎದುರು ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ವೇದ ಘೋಷಗಳೊಂದಿಗೆ ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು.

ಧರ್ಮಸ್ಥಳ ದೇವರ ದರ್ಶನ ಬಳಿಕ ಮೋದಿ, ಉಜಿರೆಯ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಸ್ಟೇಡಿಯಂನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರೂಪೇ ಕಾರ್ಡ್ ವಿತರಣೆ, ತಂತ್ರಾಂಶ ಆಧಾರಿತ ಸ್ವಸಹಾಯ ಸಂಘ ನಿರ್ವಹಣೆ ಒಪ್ಪಂದ ವಿನಿಮಯ ಮತ್ತು ಭೂಮಿ ತಾಯಿಯನ್ನು ರಕ್ಷಿಸಿ ಮತ್ತು ಮುಂದಿನ ಪೀಳಿಗೆಗೆ ವರ್ಗಾಯಿಸಿ ಅಭಿಯಾನ ಉದ್ಘಾಟಿಸಿದರು.  ಇನ್ನು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಮಾತು ಆರಂಭಿಸಿದ್ದು ವಿಶೇಷವಾಗಿತ್ತು. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಧರ್ಮಸ್ಥಳದ ಎಲ್ಲ ಬಂಧುಗಳಿಗೆ ನನ್ನ ನಮನ ಎಂದರು.

ದೇಶದ ಯುವಕರಿಗೆ ವೀರೇಂದ್ರ ಹೆಗ್ಗಡೆ  ಮಾದರಿ ಅಂತ ಪ್ರಧಾನಿ ಮೋದಿ ಹೇಳಿದ್ರು. ಭಾಷಣದುದ್ದಕ್ಕೂ ಹೆಗ್ಗಡೆ ಅವರ ಸಾಧನೆಯನ್ನು ಮೋದಿ ಕೊಂಡಾಡಿದ್ರು. ಹೆಗ್ಗಡೆಯವರಿಗೆ ಸ್ಥಾನಮಾನ ಸಿಕ್ಕಿದರೂ ಸರಳ ಜೀವನ ನಡೆಸುತ್ತಿದ್ದಾರೆ, ಶಿಕ್ಷಣ, ಸ್ವಸಹಾಯ ಸಂಘಗಳಿಂದ ಬಡವರ ಕಲ್ಯಾಣಕ್ಕೆ ಮುಂದಾಗಿದ್ದಾರೆ. ದೇಶ ವಿದೇಶಗಳಲ್ಲಿ ಹಲವು ಗ್ರಾಮೀಣಾಭಿವೃದ್ಧಿ ಅಂಶಗಳಿಗೆ ಹೆಗ್ಗಡೆ ಸ್ಫೂರ್ತಿ ಅಂತ ಮೋದಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್