
ಗಾಂಧಿನಗರ: ತಾವು ಸಾಗುತ್ತಿದ್ದ ದಾರಿಯಲ್ಲಿ ಬಂದ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬೆಂಗಾವಲು ವಾಹನಗಳನ್ನು ನಿಲ್ಲಿಸಿ ಮಾದರಿಯಾಗಿದ್ದಾರೆ.
ಆಫ್ರಿಕನ್ ಡೆವಲಪ್‌ಮೆಂಟ್ ಬ್ಯಾಂಕ್‌ನ 52ನೇ ವಾರ್ಷಿಕ ಸಭೆಯ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಗಾಂಧಿನಗರದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಗಾಂಧಿನಗರ-ಅಹ್ಮದಾಬಾದ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಮೀಪಿಸುತ್ತಿದ್ದಾಗ ಆ್ಯಂಬುಲೆನ್ಸ್ ಬರುವುದನ್ನು ಪ್ರಧಾನಿ ಗಮನಿಸಿದರು. ತಕ್ಷಣವೇ ಭದ್ರತಾ ನಿಯಮಗಳನ್ನು ಮುರಿದು, ತಮ್ಮ ಬೆಂಗಾವಲು ವಾಹನಗಳನ್ನು ಬದಿಗೆ ಸರಿದು ನಿಲ್ಲುವಂತೆ ಪ್ರಧಾನಿ ಸೂಚಿಸಿದರು.
ಆ್ಯಂಬುಲೆನ್ಸ್ ಸಾಗಲು ಅವಕಾಶ ಮಾಡಿಕೊಟ್ಟರು. ಕಳೆದ ತಿಂಗಳಷ್ಟೇ ವಿಐಪಿ ವಾಹನಗಳ ಮೇಲಿನ ಕೆಂಪು ದೀಪಗಳನ್ನು ತೆಗೆಯುವ ನಿರ್ಧಾರ ಕೈಗೊಂಡಿದ್ದ ಪ್ರಧಾನಿ, ಪ್ರತಿಯೊಬ್ಬ ಭಾರತೀಯನೂ ವಿಐಪಿ ಎಂದು ಪ್ರತಿಪಾದಿಸಿದ್ದರು.
(ಚಿತ್ರಕೃಪೆ: ದೇಶ್ ಗುಜರಾತ್)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.