
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಅಂದು ಬೆಂಗಳೂರಿಗೆ ಆಗಮಿಸಲಿ ರುವ ಪ್ರಧಾನಿ, ಮಹಾನಗರದಲ್ಲಿ ಹಮ್ಮಿಕೊಂಡಿರುವ ಆದಿಚುಂಚನಗಿರಿ ಮಠದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ ಬೀದರ್‌ಗೆ ತೆರಳಲಿದ್ದು, ಕಲಬುರಗಿ-ಬೀದರ್ ಮಧ್ಯೆ ಈಗಾಗಲೇ ಪೂರ್ಣಗೊಂಡಿರುವ 104 ಕಿ.ಮೀ. ಉದ್ದದ ರೈಲುಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಬಗ್ಗೆ ಬೀದರ್ ಸಂಸದ ಭಗವಂತ ಖೂಬಾ ದೀಪಾವಳಿ ನರಕ ಚತುರ್ದಶಿ ದಿನದಂದು ಟ್ವೀಟ್ ಮಾಡಿದ್ದಾರೆ. ಬಳಿಕ ಅವರು ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಹಿಂದಿರುಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.