
ನವದೆಹಲಿ: ಅಮೆರಿಕಾ ಪ್ರವಾಸ ಸಂದರ್ಭದಲ್ಲಿ ಮಹತ್ವದ ವಿಚಾರಗಳನ್ನು ಚರ್ಚಿಸದ ನರೇಂದ್ರ ಮೋದಿಯವರನ್ನು ದುರ್ಬಲ ಪ್ರಧಾನಿಯೆಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಡೊನಾಲ್ಡ್ ಟ್ರಂಪ್’ರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರಧಾನಿ ಮೋದಿ ‘ಭಾರತಾಡಳಿತದ ಜಮ್ಮು & ಕಾಶ್ಮೀರ’ ಪದದ ಬಳಕೆ ಹಾಗೂ ಎಚ್1-ಬಿ ವೀಸಾ ವಿಚಾರದ ಬಗ್ಗೆ ಪ್ರಸ್ತಾಪನೇ ಎತ್ತಿಲ್ಲ. ಭಾರತವು ದುರ್ಬಲ ಪ್ರಧಾನಿಯನ್ನು ಹೊಂದಿದೆ ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.
ಟ್ರಂಪ್ ಜತೆ ಮಾತುಕತೆ ಸಂದರ್ಭದಲ್ಲಿ ಮೋದಿ ಮಹತ್ವದ ವಿಚಾರಗಳನ್ನು ನಿರ್ಲಕ್ಷಿಸಿದ್ದಾರೆ ಎಂದ ರಾಹುಲ್ ಗಾಂಧಿ, ಅಮೆರಿಕಾ ಪ್ರವಾಸವು ಮೋದಿಯವರಿಗೆ ಬರೇ ಫೋಟೋ ಕ್ಲಿಕ್ಕಿಸುವ ಅವಕಾಶವಾಗಿತ್ತು ಎಂದು ಟೀಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.