
ಗುವಾಹಟಿ: ಭಾರತವು ಹಿಂದೂ ರಾಷ್ಟ್ರವಾಗಿದ್ದು, ದೇಶದಲ್ಲಿ ವಿವಿಧ ಭಾಷೆಯ ಜನರು, ಧಾರ್ಮಿಕತೆ ಮತ್ತು ಬೇರೆ ಬೇರೆ ಜೀವನ ಪದ್ಧತಿ ಅನುಸರಿಸುವ ಹೊರತಾಗಿಯೂ ಭಾರತ ಏಕತೆ ಸಾಧಿಸಿದೆ. ಇದಕ್ಕೆ ಹಿಂದುತ್ವವೇ ಕಾರಣ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಇಲ್ಲಿನ ಪಶು ವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ‘ಬಹು ಸಂಸ್ಕೃತಿಯನ್ನು ಹಿಂದುತ್ವ ಒಪ್ಪಿಕೊಳ್ಳುತ್ತದೆ. ಆದರೆ, ವಿಭಜನೆಯನ್ನು ಒಪ್ಪಿಕೊಳ್ಳಲ್ಲ.
ಅದಕ್ಕಾಗಿಯೇ ಭಾರತವು ಹಿಂದೂ ರಾಷ್ಟ್ರವಾಗಿದೆ,’ ಎಂದು ಪ್ರತಿಪಾದಿಸಿದ್ದಾರೆ. ಹಿಂದುತ್ವವನ್ನು ಅಪ್ಪಿಕೊಂಡಿದ್ದಕ್ಕಾಗಿಯೇ ಭಾರತ ಇಂದು ಒಟ್ಟಾಗಿದೆ. ಆದರೆ, ಈ ಹಿಂದುತ್ವವನ್ನು ಒಪ್ಪಿಕೊಳ್ಳದ ಕಾರಣಕ್ಕಾಗಿಯೇ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ರಾಷ್ಟ್ರಗಳು ವಿಭಜನೆಯಾಗಿವೆ. ಜನ ಸಾಮಾನ್ಯರ ಹೃದಯಗಳನ್ನು ಗೆಲ್ಲುವತ್ತ ಭಾರತ ಇನ್ನೂ ಬಲಿಷ್ಠವಾಗಬೇಕಿದೆ, ಎಂದು ಇದೇ ವೇಳೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.