ಪ್ರಸಿದ್ಧ ನಟ ಬಿಜೆಪಿಗೆ: ಲೋಕಸಭಾ ಚುನಾವಣೆಗೆ ಸ್ಪರ್ಧೆ?

Published : Sep 05, 2018, 11:22 AM ISTUpdated : Sep 09, 2018, 10:24 PM IST
ಪ್ರಸಿದ್ಧ ನಟ ಬಿಜೆಪಿಗೆ: ಲೋಕಸಭಾ ಚುನಾವಣೆಗೆ ಸ್ಪರ್ಧೆ?

ಸಾರಾಂಶ

ಲೋಕಸಭಾ ಚುನಾವಣೆಗೆ ವಿವಿಧ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಇದೀಗ ಪ್ರಸಿದ್ಧ ನಟರೋರ್ವರು ಬಿಜೆಪಿ ಸೇರಿ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

ನವದೆಹಲಿ: ಕೇರಳದಲ್ಲಿ ನೆಲೆ ಸೃಷ್ಟಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಬಿಜೆಪಿ, 2019ರ ಲೋಕಸಭಾ ಚುನಾವಣೆಗೂ ಮೊದಲು, ಖ್ಯಾತ ನಟ ಮೋಹನ್‌ಲಾಲ್‌ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ನಟ ಮೋಹನ್‌ಲಾಲ್‌ ಮಂಗಳವಾರ ಇಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಇಂಥದ್ದೊಂದು ಸುದ್ದಿಗೆ ಕಾರಣವಾಗಿದೆ. ಮೋಹನ್‌ಲಾಲ್‌ ಅವರನ್ನು ತಿರುವನಂತಪುರ ಕ್ಷೇತ್ರದಿಂದ ಲೋಕಸಭೆಗೆ ಕಣಕ್ಕೆ ಇಳಿಸಲು ಆರ್‌ಎಸ್‌ಎಸ್‌ ಕೂಡಾ ಉತ್ಸುಕವಾಗಿದೆ ಎನ್ನಲಾಗಿದೆ.

ಆದರೆ ಮೋದಿ ಭೇಟಿ ಬಳಿಕ ಮೋಹನಲಾಲ್‌ ಯಾವುದೇ ರಾಜಕೀಯ ವಿಷಯದ ಕುರಿತು ಪ್ರಸ್ತಾಪ ಮಾಡಲಿಲ್ಲ. ತಮ್ಮ ವಿಶ್ವಶಾಂತಿ ಫೌಂಡೇಶನ್‌ ನಡೆಸುತ್ತಿರುವ ಸಮಾಜ ಸೇವೆಗಳ ಕುರಿತಂತೆ ಮೋದಿಗೆ ವಿವರಿಸಿದೆ. ಜೊತೆಗೆ ಪ್ರವಾಹಪೀಡಿತ ನವ ಕೇರಳ ನಿರ್ಮಾಣಕ್ಕೆ ಪರಿಹಾರ ಕಂಡುಕೊಳ್ಳುವ ‘ಜಾಗತಿಕ ಮಲೆಯಾಳಿ ದುಂಡು ಮೇಜಿನ ಸಭೆ’ ಆಯೋಜಿಸಿದ್ದು, ಅದರಲ್ಲಿ ಭಾಗವಹಿಸುವಂತೆ ಪ್ರಧಾನಿಗೆ ಆಹ್ವಾನ ನೀಡಿದೆ. ಈ ವೇಳೆ ಕೇರಳ ಪುನರ್‌ನಿರ್ಮಾಣಕ್ಕೆ ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಮೋದಿ ಭರವಸೆ ನೀಡಿದರು ಎಂದು ಮೋಹನ್‌ಲಾಲ್‌ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ