ದಿಢೀರ್ ಅಧ್ಯಕ್ಷ ಬದಲಿಸಿದ ರಾಹುಲ್: ತಕ್ಷಣದಿಂದಲೇ ಜಾರಿಯ ಫರ್ಮಾನು!

By Web DeskFirst Published Jun 28, 2019, 4:07 PM IST
Highlights

ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ರಾಹುಲ್ ಗಾಂಧಿ| ಏಕಾಏಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ| ಛತ್ತೀಸ್'ಗಡ್ ನೂತನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೋಹನ್ ಮಾರ್ಕಮ್ ಆಯ್ಕೆ| ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಸಿ ರಾಹುಲ್ ಗಾಂಧಿ ಆದೇಶ| ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಅವರಿಂದ ಸಿಪಿಸಿಸಿ ಅಧ್ಯಕ್ಷ ಪಟ್ಟ ಕಸಿದ ರಾಹುಲ್|

ನವದೆಹಲಿ(ಜೂ.28): ಮಹತ್ವದ ಬೆಳವಣಿಗೆಯೊಂದರಲ್ಲಿ ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಸಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

ಛತ್ತೀಸ್'ಗಡ್ ನೂತನ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮೋಹನ್ ಮಾರ್ಕಮ್ ಅವರನ್ನು ನೇಮಿಸಿ ರಾಹುಲ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಮೋಹನ್ ಮರ್ಕಮ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Congress President Rahul Gandhi appoints Mohan Markam as the President of Chhattisgarh Pradesh Congress Committee with immediate effect. pic.twitter.com/vApeCGPILN

— ANI (@ANI)

ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಛತ್ತೀಸ್'ಗಡ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ನೇತೃತ್ವದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಪಡೆದ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಾರೀ ಮುಖಭಂಗ ಅನುಭವಿಸಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ, ಮೋಹನ್ ಮಾರ್ಕಮ್ ಅವರನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎನ್ನಾಲಾಗಿದೆ.

click me!