
ಚಾಮರಾಜನಗರ (ಮೇ. 30): ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ವೇಳೆ ಹುಂಡಿಯಲ್ಲಿ 1 ಕೋಟಿ 48 ಲಕ್ಷದ 90 ಸಾವಿರದ 538 ರೂಪಾಯಿ ನಗದು ದೊರೆತಿದೆ. ಅಲ್ಲದೆ 90 ಗ್ರಾಂ ಚಿನ್ನ ಮತ್ತು 1 ಕೆ.ಜಿ 490 ಗ್ರಾಂ ಬೆಳ್ಳಿ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ.
ಮೇ 29ರ ತಡ ರಾತ್ರಿವರೆಗೂ ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಇಷ್ಟೊಂದು ಕಾಣಿಕೆ ಭಕ್ತರಿಂದ ಬಂದಿದೆ. ಹುಂಡಿ ಎಣಿಕೆ ಕಾರ್ಯ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ. ರೂಪ ಅಧ್ಯಕ್ಷತೆಯಲ್ಲಿ ಸಾಲೂರು ಮಠದ ಸ್ವಾಮೀಜಿ ಗುರುಸ್ವಾಮಿ ಸಮ್ಮಖದಲ್ಲಿ ಮತ್ತು ಎಸ್ ಬಿಐ ಬ್ಯಾಂಕ್ ಸಿಬ್ಬಂದಿಗಳು ಸಿ.ಸಿ. ಕ್ಯಾಮೆರಾದ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ಪ್ರತಿ ತಿಂಗಳ ಹುಂಡಿ ಎಣಿಕೆ ಕಾರ್ಯ ತಿಂಗಳ ಕೊನೆಯ ದಿನದಂದು ನಡೆಯುತ್ತದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಆದಾಯ ತರುವ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ 2ನೇ ಸ್ಥಾನವನ್ನು ಮಲೆ ಮಹದೇಶ್ವರ ದೇವಾಲಯದ ಪಡೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.