
ಬೆಂಗಳೂರು, [ಅ.23]: ನಟ ದುನಿಯಾ ವಿಜಯ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚೆಗಷ್ಟೇ ಮಾರುತಿಗೌಡ ಹಲ್ಲೆ ಪ್ರಕರಣದಲ್ಲಿ ಜೈಲು ಹೋಗಿದ್ದ ದುನಿಯಾ ವಿಜಿಗೆ ಇದೀಗ ಮಗಳೇ ಕಂಟಕಳಾಗಿದ್ದಾಳೆ.
ದುನಿಯಾ ವಿಜಿ 2ನೇ ಪತ್ನಿ ಕೀರ್ತಿಗೌಡ ಹಾಗೂ ಮೊದಲನೇ ಪತ್ನಿ ನಾಗರತ್ನಾ ನಡುವೆ ನಡೆಯುತ್ತಿದ್ದ ಜಟಾಪಟಿ ಇದೀಗ ತಂದೆ ಮಕ್ಕಳಿಗೆ ತಿರುಗಿದೆ.
"
ಹೌದು, ಮೋನಿಕಾ ಸ್ವತಃ ತಂದೆ ದುನಿಯಾ ವಿಜಯ್ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿದ್ದಾಳೆ. ನಿನ್ನೆ [ಸೋಮವಾರ] ವಿಜಿ ಮಗಳು ಮೋನಿಕಾ ಕೀರ್ತಿಗೌಡ ಮನೆಗೆ ತೆರಳಿದ್ದರು. ಈ ವೇಳೆ ಕೀರ್ತಿಗೌಡ ಮಾರಾಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಹಲ್ಲೆ ಮಾಡಿದ್ದಾರೆ ಎಂದು ವಿಜಿ ಮಗಳು ಮೋನಿಕಾ ಗಂಭೀರ ಆರೋಪ ಮಾಡಿದ್ದಾರೆ.
ಮೋನಿಕಾ ಅವರು ತಂದೆ ದುನಿಯಾ ವಿಜಿ ಸೇರಿ 5 ಮಂದಿ ವಿರುದ್ಧ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾಳೆ. ಹಲ್ಲೆಗೊಳಗಾಗಿರುವ ಮೋನಿಕಾ ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.