ಕೋತಿಗಳ ಹಾವಳಿಗೆ ಬೇಸತ್ತು ಮಹಿಳೆ ಆತ್ಮಹತ್ಯೆ

Published : Feb 11, 2017, 12:51 PM ISTUpdated : Apr 11, 2018, 12:39 PM IST
ಕೋತಿಗಳ ಹಾವಳಿಗೆ ಬೇಸತ್ತು ಮಹಿಳೆ ಆತ್ಮಹತ್ಯೆ

ಸಾರಾಂಶ

ಮನೆಗೆ ಲಗ್ಗೆ ಇಡುತ್ತಿದ್ದ ಮಂಗಗಳು ಊಟವನ್ನು ಹೊತ್ತೊಯ್ಯುತ್ತಿದ್ದವು. ಅಲ್ಲದೆ, ಬಟ್ಟೆ-ಬರೆಗಳನ್ನು ಮತ್ತು ಪಕ್ಕದ ಜಮೀನಿನಲ್ಲಿನ ಬೆಳೆಗಳನ್ನು ನಾಶ ಮಾಡುತ್ತಿದ್ದವು.

ವೆಲ್ಲಾರದಾ(ಫೆ.11): ಕೋತಿಗಳ ನಿರಂತರ ಹಾವಳಿಯಿಂದಾಗಿ ಬೇಸತ್ತ ಮಹಿಳೆಯೊಬ್ಬರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಕೇರಳದ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ವಿಧವೆ ಪುಷ್ಪಲತಾ(52) ಎಂದು ಗುರುತಿಸಲಾಗಿದೆ. ಪುಷ್ಪಲತಾ ತಿರುವನಂತಪುರಂ ಜಿಲ್ಲೆಯ ವೆಲ್ಲಾರದಾದಲ್ಲಿ ಪುತ್ರ ಮತ್ತು ಪುತ್ರಿಯೊಂದಿಗೆ ದಿನಗೂಲಿ ಮಾಡಿ ಪುಟ್ಟ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು.

ಆದರೆ, ಅವರ ಮನೆಗೆ ಲಗ್ಗೆ ಇಡುತ್ತಿದ್ದ ಮಂಗಗಳು ಊಟವನ್ನು ಹೊತ್ತೊಯ್ಯುತ್ತಿದ್ದವು. ಅಲ್ಲದೆ, ಬಟ್ಟೆ-ಬರೆಗಳನ್ನು ಮತ್ತು ಪಕ್ಕದ ಜಮೀನಿನಲ್ಲಿನ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಇದರಿಂದ ರೋಸಿ ಹೋದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಹಾಗೂ ಗ್ರಾಮ ಪಂಚಾಯತ್'ಗೂ ದೂರ ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ