
ನವದೆಹಲಿ: ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಅವಧಿಯಲ್ಲಿ ಭಾರೀ ಮಳೆ ಸುರಿದು ಜಲಾಶಯಗಳೆಲ್ಲಾ ಉಕ್ಕಿ ಹರಿಯುತ್ತಿದ್ದರೂ, ಈಗಲೂ ಕರ್ನಾಟಕದ 16 ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ, ಈ ಪೈಕಿ 2 ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ ಕೊರತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಇಡೀ ದಕ್ಷಿಣ ಭಾರ ತದ ಚಿತ್ರಣ ಗಮನಿಸಿದರೆ ಒಟ್ಟಾರೆ ಶೇ.40ರಷ್ಟು ಮಳೆ ಕೊರತೆ ಇದೆ. ದಕ್ಷಿಣ ಭಾರತದ 125 ರ ಪೈಕಿ 54 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.
ತಮಿಳುನಾಡಿನ 32ರ ಪೈಕಿ 20 ಜಿಲ್ಲೆಗಳಲ್ಲಿ, ತೆಲಂಗಾಣದ ಆರು, ಆಂಧ್ರಪ್ರದೇಶದ 6 ಜಿಲ್ಲೆಗಳಲ್ಲಿ, ಪುದುಚೇರಿ ಯ ಎಲ್ಲ 4 ಜಿಲ್ಲೆಗಳಲ್ಲಿ ಮಳೆ ಕೊರತೆಯಿದೆ ಕೇರಳದ 10 ಜಿಲ್ಲೆಗಳಲ್ಲಿ ಹೆಚ್ಚುವರಿ ಮಳೆಯಾಗಿದ್ದರೆ, ಎರಡು ಜಿಲ್ಲೆಗಳಲ್ಲಿ ತೀವ್ರ ಹೆಚ್ಚಳವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.