
ಬೆಂಗಳೂರು: ಈ ತಿಂಗಳ 20ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಭೆಯೊಂದರಲ್ಲಿ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಇನ್ನು ಒಂದು ವಾರದಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
ತಮಿಳುನಾಡಿಗೆ ನೀರು ಹರಿಸಲು ಯಾವುದೇ ಸಮಸ್ಯೆ ಇಲ್ಲ. 20ರಂದು ಬಾಗಿನ ಅರ್ಪಿಸುವ ಮೊದಲು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯುವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.