
ನವದೆಹಲಿ [ಆ.19]: ನಿಧಾನವಾಗಿ ಆರಂಭವಾದರೂ ಬಳಿಕ ದೇಶಾದ್ಯಂತ ಭಾರೀ ಪ್ರಮಾಣದಲ್ಲಿ ಅಪ್ಪಳಿಸುತ್ತಿರುವ ಮುಂಗಾರು ಮಳೆ, ಇದುವರೆಗೆ ದೇಶದ ನಾನಾ ಭಾಗಗಳಲ್ಲಿ 1058 ಮಂದಿಯನ್ನು ಬಲಿ ಪಡೆದಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 245 ಮಂದಿ ಬಲಿಯಾಗಿದ್ದಾರೆ.
ಉಳಿದಂತೆ ಕೇರಳದಲ್ಲಿ 155, ಪಶ್ಚಿಮ ಬಂಗಾಳದಲ್ಲಿ 154, ಬಿಹಾರದಲ್ಲಿ 130, ಗುಜರಾತ್‌ನಲ್ಲಿ 107, ಅಸ್ಸಾಂ ಹಾಗೂ ಕರ್ನಾಟಕದಲ್ಲಿ ತಲಾ 94 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಮೌಲ್ಯಮಾಪನದಲ್ಲಿ ತಿಳಿದು ಬಂದಿದೆ.
ಮಳೆಗೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಾಗಿ ಕ್ಲಿಕ್ಕಿಸಿ
ಇಲ್ಲಿಯವರೆಗೆ ರಾಜ್ಯ ಹಾಗೂ ಕೇಂದ್ರ ಸಂಸ್ಥೆಗಳು 18 ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.