
ನವದೆಹಲಿ: ದೇಶಾದ್ಯಂತದ ರೈತರಿಗೆ ಸಿಹಿ ಸುದ್ದಿಯಿದೆ. ಇನ್ನು 2-3 ದಿನಗಳಲ್ಲಿ ಇಡೀ ದೇಶವನ್ನು ಮುಂಗಾರು ಮಳೆ ಆವರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮುಂಗಾರು ಆಗಮಿಸಿರದ ಗುಜರಾತ್, ರಾಜಸ್ಥಾನದ ಹಲವು ಭಾಗಗಳು ಸೇರಿದಂತೆ ದೇಶದ ಎಲ್ಲ ಭಾಗಗಳಿಗೂ ಮುಂಗಾರು ಮಳೆ ಸುರಿಯಲಿದೆ.
ಹೀಗಾಗಿ ವಾಯುವ್ಯ ಭಾಗದ ಮಳೆಯಾಗದ ಭಾಗಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ ಈಗಾಗಲೇ ಸುರಿಯುತ್ತಿರುವ ಮಳೆ ಇನ್ನೂ 2-3 ದಿನ ತೀವ್ರಗೊಳ್ಳಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಮುಂಬೈಯಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಭಾರತದ ಬಹುತೇಕ ಎಲ್ಲ ರಾಜ್ಯಗಳಲ್ಲೂ ಮಳೆಯ ಅಬ್ಬರ ತೀವ್ರಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.