ಗಣಿನಾಡಿನಲ್ಲಿ ಮಹಾಮಾರಿ ಡೆಂಗ್ಯೂ ಅವಾಂತರ : ಮೂರು ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ

By Suvarna Web DeskFirst Published Oct 4, 2017, 10:08 PM IST
Highlights

ಮಹಾಮಾರಿ ಡೆಂಗ್ಯೂ ಜ್ವರಕ್ಕೆ ಗಣಿನಾಡು ಬಳ್ಳಾರಿಯ ಜನರು ರೋಸಿಹೋಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಶಂಕಿತ ಡೆಂಗ್ಯೂಗೆ ಸಾವಿರಕ್ಕು ಹೆಚ್ಚು ಜನ ತುತ್ತಾಗಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬರುತ್ತಿದ್ದಾರೆ.

ಬಳ್ಳಾರಿ(ಸೆ.04): ಮಾಹಾ ಮಾರಿ ಡೆಂಗ್ಯೂ ಅವಾಂತರಕ್ಕೆ ಗಣಿನಾಡು ಬಳ್ಳಾರಿ ಜನರು ತತ್ತರಿಸಿದ್ದಾರೆ. ಕಳೆದ ಮೂರುತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಜನರು ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಿನದಿಂದ ದಿನಕ್ಕೆ ಶಂಕಿತ ಡೆಂಗ್ಯೂ ಹೆಚ್ಚಾಗುತ್ತಿದ್ದರೂ ಪಾಲಿಕೆ ನಗರದಲ್ಲಿ ಸ್ವಚ್ಚತೆ ಕಾರ್ಯ ನಡೆಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರ್ನಾಲ್ಕು ದಿನಗಳಿಂದ  ಸತತ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಅವಾಂತರ ಒಂದು ಕಡೆಯಾದರೆ ಸ್ವಚ್ಛತೆ ಕಾಣದ ನೈರ್ಮಲ್ಯ ವಾತಾವರಣದಿಂದ ಸಂಕಷ್ಟ ಎದುರಿಸುತ್ತಿರುವ ನಿವಾಸಿಗಳಿಗೆ ಈ ಮಹಾಮಾರಿ ಇನ್ನಷ್ಟು ಸಂಕಷ್ಟಕ್ಕೀಡು ಮಾಡಿದೆ.

ಮಹಾಮಾರಿ ಡೆಂಗ್ಯೂ ಜ್ವರಕ್ಕೆ ಗಣಿನಾಡು ಬಳ್ಳಾರಿಯ ಜನರು ರೋಸಿಹೋಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಶಂಕಿತ ಡೆಂಗ್ಯೂಗೆ ಸಾವಿರಕ್ಕು ಹೆಚ್ಚು ಜನ ತುತ್ತಾಗಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬರುತ್ತಿದ್ದಾರೆ. ನಿತ್ಯ ಹತ್ತಾರು ಮಂದಿ ಆಸ್ಪತ್ರೆಗೆ ಅಲೆಯುವ ಪರಿಸ್ಥಿತಿ ಎದುರಾಗಿದೆ. ಆದರೆ ನಗರದಲ್ಲಿ ಸ್ವಚ್ಚತೆ ಕಾಪಾಡದ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದ್ದು, ಬಳ್ಳಾರಿಯ ನಿವಾಸಿಗಳು ಈ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ನಗರದ ಹಲವು ಪ್ರದೇಶಗಳಲ್ಲಿ ಮೂರು ತಿಂಗಳಿಗೊಮ್ಮೆ ಸ್ವಚ್ಛತೆ ಕಾರ್ಯ ಮಾಡುತ್ತಿದ್ದು, ಹಲವು ಬಾರಿ ಮನವಿ ಮಾಡಿದ್ದರೂ ಯಾವುದೆ ಪ್ರಯೋಜನವಾಗಿಲ್ಲ. ಪಾಲಿಕೆ ಅಧಿಕಾರಿಗಳು ಇತ್ತ ಸುಳಿಯುತ್ತಿಲ್ಲ. ಹೀಗಾಗಿ ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದೇವೆ. ಕಳೆದ ಒಂದು ವಾರದ ಹಿಂದಷ್ಟೆ ಈ ಪ್ರದೇಶದಲ್ಲಿ 11 ವರ್ಷದ ಬಾಲಕಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.  ಹೆಚ್ಚು ಅನಾಹುತವಾಗುವ ಮುನ್ನ ಜಿಲ್ಲಾಡಳಿತ  ಮಾರಕ ರೋಗದ  ತಡೆಗೆ ಕ್ರಮ ಕೈಗೊಳ್ಳಬೇಕಿದೆ.

 

 

click me!