
ನವದೆಹಲಿ(ಸೆ.27): ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಮ್ಯಾನ್ಮಾರ್ ಮೂಲದ ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ತದ್ವಿರುದ್ಧವಾದ ಅಭಿಪ್ರಾಯವನ್ನು ಬಿಜೆಪಿ ಸಂಸದ ವರುಣ್ ಗಾಂಧಿ ವ್ಯಕ್ತಪಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ‘ದ್ರತಾ ಪರಿಶೀಲನೆ ಬಳಿಕ ರೋಹಿಂಗ್ಯಾ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬೇಕು ಎಂದು ವರುಣ್ ಅವರು ಹಿಂದಿ ದೈನಿಕವೊಂದರಲ್ಲಿ ಲೇಖನ ಬರೆದಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಅಹೀರ್, ಮನಸ್ಸಿನಲ್ಲಿ ರಾಷ್ಟ್ರೀಯ ಹಿತಾಸಕ್ತಿ ತುಂಬಿಕೊಂಡಿರುವವರು ಈ ರೀತಿಯ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.
ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ವರುಣ್, ನಿರಾಶ್ರಿತರಿಗೆ ಆಶ್ರಯ ನೀಡುವ ಭಾರತದ ನೀತಿಯನ್ನು ವಿಶ್ಲೇಷಿಸಿ ಬರೆದಿದ್ದೆ ಎಂದು ತಿಳಿಸಿದ್ದಾರೆ. ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡುವುದಾಗಿ ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.