
ನವದೆಹಲಿ : ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ಮುಸ್ಲಿಮರು ಪ್ರಾರ್ಥನೆ ಮಾಡಲು ಮಸೀದಿಯೇ ಆಗಬೇಕೆಂದಿಲ್ಲ ಎಂಬ 1994ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ವಿಸ್ತೃತ ಸಾಂವಿಧಾನಿಕ ಪೀಠಕ್ಕೆ ಈ ವಿಚಾರವನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಹೇಳಿದ್ದು, ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ 1994ರ ತೀರ್ಪನ್ನೇ ಮತ್ತೊಮ್ಮೆ ಎತ್ತಿ ಹಿಡಿದಿದೆ.
ಧಾರ್ಮಿಕ ಕಾರಣಕ್ಕಾಗಿ ಅಯೋಧ್ಯೆ ಬಾಬ್ರಿ ಮಸೀದಿ ಜಾಗಕ್ಕೆ ಮುಸ್ಲಿಂ ಸಮುದಾಯ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಈ ತೀರ್ಪು ಮಹತ್ವವಾದುದಾಗಿದೆ.
1994 ರಲ್ಲಿ ನಮಾಜನ್ನು ಎಲ್ಲಾದರೂ ಮಾಡಬಹುದು. ಮಸೀದಿಯಲ್ಲೇ ಮಾಡಬೇಕಿಲ್ಲ. ನಮಾಜ್ ಗಾಗಿ ಪ್ರತ್ಯೇಕ ಜಾಗವನ್ನು ಸರ್ಕಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಮುಸ್ಲಿಂ ಸಂಘಟನೆಗಳು ಪ್ರಶ್ನಿಸಿದ್ದವು.
ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿ ಸದಸ್ಯ ಪೀಠ, ಇಸ್ಲಾಂನಲ್ಲಿ ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಅಶೋಕ್ ಭೂಷಣ್ ಮತ್ತು ಜಸ್ಟೀಸ್ ಅಬ್ದುಲ್ ನಜೀರ್ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ತೀರ್ಪು 2-1 ರ ಬಹುಮತದಲ್ಲಿ ಪ್ರಕಟಗೊಂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.