
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೈದ ಪ್ರಕರಣ ಸಂಬಂಧ ಜೈಲು ಶಿಕ್ಷೆ ಅನುಭವಿಸುತ್ತಿರುವ 7 ಮಂದಿಗೆ ಕ್ಷಮಾಪಣೆ ನೀಡಿ, ಅವರನ್ನು ಬಿಡುಗಡೆ ಮಾಡಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ ಬೆನ್ನಲ್ಲೇ, ರಾಜೀವ್ ಹಂತಕನಾದ ತನ್ನ ಮಗನಿಗೆ ದಯಾಮರಣ ನೀಡುವಂತೆ ಪೆರಾರಿವಾಲನ್ ಅವರ ತಾಯಿ ಮನವಿ ಮಾಡಿದ್ದಾರೆ.
ನನ್ನ ಮಗ ಸೇರಿದಂತೆ ರಾಜೀವ್ ಹಂತಕರ ಎಲ್ಲರಿಗೂ ಕ್ಷಮಾದಾನ ನೀಡಿ ಬಿಡುಗಡೆ ಮಾಡಲು ಸಾಧ್ಯವಾಗದಿದ್ದರೆ, ನನ್ನ ಮಗನಿಗೆ ದಯಾ ಮರಣ ಕರುಣಿಸಿ ಎಂದು ರಾಜೀವ್ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಲನ್ ತಾಯಿ ಅರ್ಪುತಾಮ್ಮಳ್ ಕೋರಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ದೀರ್ಘಾವಧಿಯ ಕಾನೂನು ಹೋರಾಟದಿಂದ ಮತ್ತು ಇತ್ತೀಚೆಗಿನ ಬೆಳವಣಿಗೆ ಕಂಡು ತುಂಬಾ ಬೇಸರವಾಗಿದೆ. ನಮಗೆ ಇಂಥ ಜೀವನವೇ ಬೇಡ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಮ್ಮನ್ನೆಲ್ಲ ಕೊಲ್ಲುವಂತೆ ಮನವಿ ಮಾಡಲು ನಿರ್ಧರಿಸಿದ್ದೇನೆ. ನನ್ನ ಮಗನಿಗೂ ದಯಾಮರಣ ನೀಡಿ, ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.