
ಮುಂಬೈ(ಅ.05): 2014ರ ಲೋಕಸಭೆ ಚುನಾವಣೆಗೂ ಮುನ್ನ ಬಿಡುಗಡೆಯಾಗಿ ಸಾಕಷ್ಟು ಸಂಚಲನ ಮೂಡಿಸಿದ್ದ ಸಂಜಯ ಬಾರು ಅವರ ‘ದ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಪುಸ್ತಕವನ್ನೇ ಆಧರಿಸಿದ ಸಿನಿಮಾವೊಂದು 2019ರ ಲೋಕಸಭೆ ಚುನಾವಣೆಗೂ ಮುನ್ನ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾತ್ರವನ್ನು ಇಟಲಿಯ ನಟಿಯೊಬ್ಬರು ನಿರ್ವಹಿಸಲಿದ್ದಾರೆ. ಭಾರತ- ಐರ್ಲೆಂಡ್ ಮೂಲದ, ಹಾಲಿ ಬ್ರಿಟನ್ ಪ್ರಜೆ ಹಾಲಿವುಡ್ ನಟರೊಬ್ಬರು ರಾಹುಲ್ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಪಾತ್ರದಲ್ಲಿ ಖ್ಯಾತ ನಟ ಅನುಪಮ್ ಖೇರ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ರಾಷ್ಟ್ರ ಪತಿ ಕಲಾಂ ಹಾಗೂ ಸೋನಿಯಾ ರಾಜಕೀಯ ಸಲಹೆಗಾರ ಅಹಮದ್ ಪಟೇಲ್ ಪಾತ್ರವನ್ನು ಭಾರತೀಯ ನಟರೇ ಅಭಿನಯಿಸಲಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಸಿಂಗ್ ಪ್ರಧಾನಿಯಾಗಿದ್ದಾಗ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ ಬಾರು ಬರೆದಿದ್ದ ಪುಸ್ತಕವನ್ನಿಟ್ಟುಕೊಂಡು ಸಿನಿಮಾ ನಿರ್ಮಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.