
ಚಾಮರಾಜನಗರ:
ಚಾಮರಾಜನಗರ:
ಚಾಮರಾಜನಗರ: ಬಿಜೆಪಿ ಸಂಸದ ಪ್ರತಾಪ್ ಸಿಂಹ ತಮ್ಮ ಕಾರ್ಯಕರ್ತರನ್ನ ಮುಟ್ಟಿದ್ರೆ ಹುಷಾರ್ ಎಂದು ಹಿಂದೊಮ್ಮೆ ಎಚ್ಚರಿಸಿದ್ದರು. ಈಗ ಮತ್ತೊಮ್ಮೆ ಅದೇ ಎಚ್ಚರಿಕೆ ನೀಡಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ, ಸುಮ್ಮನಿರೋ ಮಾತೆ ಇಲ್ಲ. ಹುಷಾರ್ ಎಂದು ಸಂಸದ ಪ್ರತಾಪ್ ಸಿಂಹ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಾಮರಾಜಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಬಿಜೆಪಿಯ ನಮ್ಮ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಈಗಲೂ ನಾವು ಸುಮ್ಮನೆ ಕೂರಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪುನರುಚ್ಚಾರಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರದಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ ನೀಡಿದರೆ ಸುಮ್ಮನಿರಲ್ಲ. ಹಾಸನದಲ್ಲಿ ಸ್ಪರ್ಧೆ ಮಾಡುವುದು ಕೇವಲ ಊಹಾಪೋಹ. ಮೈಸೂರು ಬಿಟ್ಟು ಬೇರೆಲ್ಲೂ ಸ್ಪರ್ಧಿಸಲ್ಲ. ಮೈಸೂರಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮೈಸೂರಿನ ಅಭಿವೃದ್ಧಿಗೆ ಕೇಂದ್ರದಿಂದ ಹನ್ನೊಂದುವರೆ ಸಾವಿರ ಕೋಟಿ ತಂದಿದ್ದೇನೆ ಎಂದು ಇದೇ ವೇಳೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.