
ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಸ್ಪರ್ಧಿಸಿದರೆ ಸಂತೋಷಪಡುತ್ತೇನೆ ಎಂದು ಸಂಸದ ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ 1800 ಮತ ಪಡೆದಿದ್ದರು. ಈ ಬಾರಿ ರಮ್ಯಾ ಸ್ಪರ್ಧಿಸಿದರೆ ಆ ಮತಗಳು ಎರಡು ಪಟ್ಟು ಹೆಚ್ಚಾಗಬಹುದು ಎಂದು ಲೇವಡಿ ಮಾಡಿದರು.
ಇದೇ ವೇಳೆ ಮಾಜಿ ಶಾಸಕ ಎಂ. ಶ್ರೀನಿವಾಸ್ ಮಾತನಾಡಿ, ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕರೆ ಹಾಲಿ ಶಾಸಕ ಅಂಬರೀಷ್ ಅವರನ್ನು ಸೋಲಿಸುವುದೇ ನನ್ನ ಗುರಿ. ಇದಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇನೆ. ಅಂಬರೀಷ್ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬರುವುದಿಲ್ಲ. ಇದರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರೇ ಸ್ಪಷ್ಟಪಡಿಸಿದ್ದಾರೆ. ಅಂಬರೀಷ್ ಶಾಸಕರಾದ ಬಳಿಕ ನಾಲ್ಕು ವರ್ಷದಲ್ಲಿ 4 ಬಾರಿ ಮಾತ್ರ ಸದನಕ್ಕೆ ಹೋಗಿದ್ದಾರೆ. ವರ್ಷಕ್ಕೊಮ್ಮೆ ಕ್ಷೇತ್ರಕ್ಕೆ ಬರುತ್ತಾರೆ. ಅಂಬರೀಷ್‌ಗೆ ಮತ ಹಾಕಿದ್ದಕ್ಕೆ ಮಂಡ್ಯದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.