
ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10.43ರ ಸುಮಾರಿಗೆ ಘಾಟ್ ಕೋಪರ್ ಪ್ರದೇಶದಲ್ಲಿ ದಾಮೋದರ ಪಾರ್ಕ್ ಬಳಿ ಸಾಯಿ ದರ್ಶನ ಅಪಾರ್ಟ್ಮೆಂಟ್ ಕಟ್ಟಡ ಕುಸಿದಿದೆ. ಕಟ್ಟಡಗಳ ಅವಶೇಷಗಳಡಿ ಸುಮಾರು 30ಕ್ಕೂ ಹೆಚ್ಚು ಮಂದಿ ಸಿಲಿಕಿರುವ ಶಂಕೆಯಿದೆ. ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ಮತ್ತು ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಕೋಲ್ಕತ್ತಾದಲ್ಲೂ ಕಟ್ಟಡ ಕುಸಿತ
ಇತ್ತ ಕೋಲ್ಕತ್ತದಲ್ಲೂ ಬೌ ಬಜಾರ್ನ ಸೆಂಟ್ರಲ್ ತಲ್ ತಲಾ ಕಟ್ಟಡ ಕುಸಿದು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.