
ಮುಂಬೈ(ಸೆ.01): ಮುಂಬೈನಲ್ಲಿ 115 ವರ್ಷದ ಹಳೆಯ ಐದು ಅಂತಸ್ತಿನ ಕಟ್ಟಡ ಕುಸಿತದಿಂದ ಮೃತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 14 ಮಂದಿ ಗಾಯಗೊಂಡಿದ್ದು, ಕಟ್ಟಡದ ಅವಶೇಷಗಳಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಬೈನಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಇಲ್ಲಿನ ಡೋಂಗ್ರಿ ಪ್ರದೇಶದ ಭೇಂಡಿ ಬಜಾರ್‌ನಲ್ಲಿನ 5 ಅಂತಸ್ತಿನ ಕಟ್ಟಡ ನಿನ್ನೆ ಬೆಳಗ್ಗೆ ಕುಸಿದಿತ್ತು.
ಆರಂಭದಲ್ಲಿ 10 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ನಂತರ 21 ಜನರು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದ್ದು, ಇದೀಗ ಈ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮೃತರಲ್ಲಿ 9 ಮಹಿಳೆಯರು ಹಾಗೂ 24 ಜನ ಪುರುಷರು ಸೇರಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಇನ್ನೂ ಹಲವರು ಸಿಲುಕಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತನಿಖೆಗೆ ಆದೇಶಿಸಿದ್ದು, ಮೃತ ಕುಟುಂಬಗಳಿಗೆ ತಲಾ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.