
ಇಸ್ಲಾಮಾಬಾದ್[ಡಿ.18]: ಅಂತರ್ಜಾಲದಲ್ಲಿ ಪರಿಚಿತಗೊಂಡಿದ್ದ ತನ್ನ ಪ್ರಿಯತಮೆಯನ್ನು ಭೇಟಿ ಮಾಡಲು ನಕಲಿ ಪಾಸ್‌ಪೋರ್ಟ್ ಮೂಲಕ ಪಾಕಿಸ್ತಾನಕ್ಕೆ ತೆರಳಿದ್ದ ಮುಂಬೈ ಮೂಲ ಹಮೀದ್ ನಿಹಾಲ್ ಅನ್ಸಾರಿಯನ್ನು ಪಾಕಿಸ್ತಾನ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
3 ವರ್ಷಗಳ ಹಿಂದೆ ಅನ್ಸಾರಿ, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಆಷ್ಘಾನಿಸ್ತಾನದ ಮೂಲಕ ಪಾಕ್‌ಗೆ ತೆರಳಿದ್ದ. ಆದರೆ ಈತ ಭಾರತೀಯ ಗುಪ್ತಚರ ಎಂದು ಬಂಧಿಸಿ 3 ವರ್ಷ ಜೈಲಿಗೆ ಅಟ್ಟಲಾಗಿತ್ತು. ಇದೀಗ ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಕೋರ್ಟ್ ಆದೇಶದಂತೆ ಇಬ್ಬರನ್ನೂ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ