ಮುಂಬೈಯಲ್ಲಿ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

By Suvarna Web DeskFirst Published Aug 29, 2017, 4:23 PM IST
Highlights

ನಾಲ್ಕು ದಿನಗಳಿಂದ ಇಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆ ಇದೇ ರೀತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮಳೆಯಿಂದಾಗಿ ಭಾರೀ ಟ್ರಾಫಿಕ್ ಉಂಟಾಗಿದ್ದು, ಜನರು ಪರದಾಡುವಂತಾಗಿದೆ.

ಮುಂಬೈ (ಆ.29): ನಾಲ್ಕು ದಿನಗಳಿಂದ ಇಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆ ಇದೇ ರೀತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮಳೆಯಿಂದಾಗಿ ಭಾರೀ ಟ್ರಾಫಿಕ್ ಉಂಟಾಗಿದ್ದು, ಜನರು ಪರದಾಡುವಂತಾಗಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಐದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ದಳ (ಎನ್’ಡಿಆರ್’ಎಫ್) ಮುಂಬೈಗೆ ಧಾವಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಳೆಯ ಪ್ರಯುಕ್ತ ಸರ್ಕಾರಿ ಉದ್ಯೋಗಿಗಳಿಗೆ ರಜೆಯನ್ನು ಕೊಡಲಾಗಿದೆ. ಸ್ಥಳೀಯ ರೈಲು ಸಂಚಾರ ಸ್ಥಗಿತಗೊಂಡಿದೆ. 3 ಕಡೆ ಗೋಡೆ ಕುಸಿತ, 16 ಕಡೆ ಶಾರ್ಟ್ ಸರ್ಕ್ಯೂಟ್ ಮತ್ತು 23 ಕಡೆ ಮರಗಳು ಉರುಳಿರುವ ವರದಿಯಾಗಿದೆ.

ಇನ್ನು ಒಂದೆರಡು ದಿನ ಮುಂಬೈ, ದಕ್ಷಿಣ ಗುಜರಾತ್, ಕೊಂಕಣ್, ಗೋವಾ ಮತ್ತು ಪಶ್ಚಿಮ ವಿದರ್ಭದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಇಲಾಖೆಗಳಿಗೆ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.   

click me!