
ಮುಂಬೈ (ಮಾ.20): ಸರ್ಕಾರಿ ಆಸ್ಪತ್ರೆ ಮೇಲೆ ದಾಳಿ ಮತ್ತು ವೈದ್ಯರ ಮೇಲೆ ಸರಣಿ ಹಲ್ಲೆ ಖಂಡಿಸಿ ಮಹಾರಾಷ್ಟ್ರ ರಾಜ್ಯಾದ್ಯಂತ ವೈದ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದರು. ಸುಮಾರು 4500 ವೈದ್ಯರು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರು, ಉಪನ್ಯಾಸಕರು, ಪ್ರೊಫೆಸರ್ ಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರೋಗಿಗಳ ಸೇವಾ ವಿಭಾಗದಲ್ಲಿ ಕೆಲವು ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದರು.
ಎಂಎಆರ್ ಡಿ ನಿಯೋಗ, ಮೆಡಿಕಲ್ ಕಾಲೇಜಿನ ಮುಖ್ಯಸ್ಥರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮೇಯರನ್ನು ಭೇಟಿ ಮಾಡಿ ಭದ್ರತೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ಕೆಲವು ಆಸ್ಪತ್ರೆಗಳಲ್ಲಿ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗಳಿದ್ದಾರೆ. ರೋಗಿಗಳ ಸಂಬಂಧಿಕರಿಂದ ಪರಿಸ್ಥಿತಿ ಕೈ ಮೀರಿದಾಗ ಅದನ್ನು ಮಹಿಳೆಯರಿಂದ ನಿಯಂತ್ರಿಸಲು ಸಾಧ್ಯವಾಗದು ಎಂದು ವೈದ್ಯರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.